2:39 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಉದ್ಯೋಗ ಮಾಹಿತಿ, ಕ್ಯಾಂಪಸ್ ನೇಮಕಾತಿ

13/11/2022, 10:50

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್. ಐ. ಐ. 1 ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ರವರು “ವಿದ್ಯಾರ್ಥಿಗಳು ನಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ ಬದಲು ತಮ್ಮ ಗೌಶಲಗಳನ್ನು ಅಭಿವೃದ್ಧಿಗೊಳಿಸುವತ್ತ ಗಮನಹರಿಸಬೇಕಾದುದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಅಗತ್ಯವಾಗಿದೆ. ಪರಿಸ್ಥೆಯಲ್ಲಿ ಪಡೆದ ಅಂಕಗಳು ಪ್ರವೇಶ ಪರೀಕ್ಷೆಗಳಿಗೆ ಆತನ ಮರೆಯುವಲ್ಲಿ ಸಹಕಾರಿಯಾದರೆ ನಮ್ಮಲ್ಲಿರುವ ಗೌಗಲಗಳು ಉದ್ಯೋಗ ಪಡೆಯಲು ಸಕಾರಿಯಾಗುತ್ತವೆ” ಎಂದು ಹೇಳಿದರು.

ಎಸ್. ಐ. ಐ. ಟಿ. ಮಂಗಳೂರು ಶಾಖೆಯ ವಿದ್ಯಾರ್ಥಿ ಸಮಾಲೋಚಕರಾದ ಶ್ರೀಮತಿ ಸಿಗ‌ ರವರು ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವಿಪುಲ ಉದ್ಯೋಗವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಎನ್.ಐ.ಟಿ. ಮಂಗಳೂರು ಶಾಖೆಯ ಶೈಕ್ಷಣಿಕ ಸಲಹೆಗಾರರಾದ ಕು. ಶೀತಲ್ ರವರು ಉಪಸ್ಥಿತರಿದ್ದರು.

ರಚಿತಾ ಮತ್ತು ಬಳಗ ಪ್ರಾರ್ಥಿಸಿದರು. ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕದ ಸಂಚಾಲಕರಾದ ಡಾ. ರಾಧಾಕೃಷ್ಣ ಗೌಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾದಾನ ವಿಭಾಗದ ಪ್ರಾಧ್ಯಾಪಕರಾದ ಲೆ. ಜೋನ್ಸನ್ ಡೇವಿಸ್ ಸಿಲ್ವೇರಾ ವಂದಿಸಿದರು, ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಗೀತಾ, ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು