6:24 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಪುತ್ತೂರು ಸಂತ ಫಿಲೋಮಿನಾ ಕಾಲೇಜು: ಕೆದಂಬಾಡಿ ದತ್ತು ಗ್ರಾಮದಲ್ಲಿ ಸಾಂಸ್ಕೃತಿಕ ವೈಭವ

29/12/2022, 10:32

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯಕ್ಷ ಕಲಾ ಕೇಂದ್ರದ ವತಿಯಿಂದ ಕೆದಂಬಾಡಿ ಗ್ರಾಮದ ಶ್ರೀರಾಮ ಭಜನಾ ಮಂದಿರದಲ್ಲಿ “ಭರತ ವೈಭವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶ್ರೀರಾಮ ಭಜನಾ ಮಂದಿರದ ಪ್ರತಿಷ್ಠಾ ವಾಷಿಕೋತ್ಸವದ ಸಂದರ್ಭದಲ್ಲಿ ಕಾಲೇಜಿನ ಭಾರತೀಯ ಶಾಸ್ತ್ರೀಯ ಮತ್ತು ಜಾನಪದ ಕಲೆಗಳ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಈ ವಿಶೇಷ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಸುಮಾರು ಒಂದು ಗಂಟೆಯ ಕಾಲ ನಡೆದ ಈ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಜಾನಪದ ನೃತ್ಯಗಳನ್ನು ಪ್ರದರ್ಶಿಸಿದರು.

ಭರತ ವೈಭವ ಕಾರ್ಯಕ್ರಮನ್ನು ಕಾಲೇಜಿನ ಯಕ್ಷಕಲಾ ಕೇಂದ್ರದ ಸಂಯೋಜಕರಾದ ಪ್ರಶಾಂತ್‌ ರೈ ಅವರು ನಿರ್ದೇಶಿಸಿದರು. ಈ ಸಂದರ್ಭದಲ್ಲಿ -ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಜಯಶಂಕರ ರೈ ಬೆಡ್ರುಮಾರು ,ಎನ್ ಎಸ್ ಕಿಲ್ಲೆ ಪ್ರತಿಷ್ಠಾನದ ಸದಸ್ಯರಾದ ವಿಜಯ ಕುಮಾರ್ ರೈ, ಕೋರಂಗ ಮೋಹನ ಆಳ್ವ ಮುಂಡಲಗುತ್ತು ಹಾಗೂ ವಿಫುಲ್ ಕಡಮಜಲು ಉಪಸ್ಥಿತರಿದ್ದರು, ಸಂತ ಫಿಲೋಮಿನಾ ಕಾಲೇಜು, ಕೆದಂಬಾಡಿ ಗ್ರಾಮ ಪಂಚಾಯತ್‌ ಮತ್ತು ದೇಶಭಕ್ತ ಎಸ್.ಎಸ್.ಕಿಲ್ಲೆ ಪ್ರತಿಷ್ಠಾನ ಒಡಂಬಡಿಕೆ ಪತ್ರಕ್ಕೆ ಈಗಾಗಲೇ ಸಹಿ ಮಾಡಿದ್ದು ಮುಂದಿನ ದಿನಗಳಲ್ಲಿ ಕಾಲೇಜಿನ ವತಿಯಿಂದ ಕೆದಂಬಾಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು