ಇತ್ತೀಚಿನ ಸುದ್ದಿ
ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ “ಜೀವನ ಕೌಶಲ್ಯ ತರಬೇತಿ”ಕಾರ್ಯಕ್ರಮ
02/06/2022, 16:09
ಪುತ್ತೂರು(reporterkarnataka.com): ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ಹಾಗೂ ಈ ಯೋಜನೆಯ ಮೂಲಕ ನಮ್ಮ ವ್ಯಕ್ತಿತ್ವವನ್ನು ಯಾವ ರೀತಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಉಪನ್ಯಾಸಕಿ ಶೀತಲ ಹೇಳಿದರು.
ಅವರು ವಿವೇಕಾನಂದ ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ರಾಷ್ಟೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಜೀವನ ಕೌಶಲ್ಯ ತರಬೇತಿ ಎಂಬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಸೇವಾ ಯೋಜನೆಯ ಕುರಿತು ತಮ್ಮ ನೆನಪುಗಳನ್ನು ಹಾಗೂ ಅನುಭವಗಳನ್ನು ಹಂಚಿಕೊಂಡರು.
ಯಾವ ರೀತಿಯಲ್ಲಿ ಸೇವೆಗಳನ್ನು ತಮ್ಮನು ತಾವು ತೊಡಗಿಸಿಕೊಳ್ಳಬೇಕು ಎಂದು ಶೀತಲ ಅವರನ್ನು ಪ್ರತಿಬಿಂಬಿಸಿ ಹಾಗೂ ಅವರ ಕಾರ್ಯಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಇಲ್ಲಿನ ವಿವೇಕಾನಂದ ಕಾಲೇಜಿನ ಪ್ರಾಶುಪಾಲರಾದ ಪ್ರೊ. ವಿಷ್ಣು ಗಣಪತಿ ಭಟ್ ನುಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಾದ ತೇಜಸ್ವಿ ಅವರು ಸ್ವಾಗತಿಸಿದರು. ನಿಕ್ಷೀತಾ ವಂದಿಸಿದರು. ಸಂಜಯ್ ಕಾರ್ಯಕ್ರಮ ನಿರೂಪಿಸಿದರು.