ಇತ್ತೀಚಿನ ಸುದ್ದಿ
PWD Minister Visit | ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಆದೇಶ
18/02/2025, 12:02

ಬೆಳ್ತಂಗಡಿ(reporterkarnataka.com): ಗುರುವಾಯಾನಕೆರೆಗೆ ಭೇಟಿ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕುರಿತು ಮನವಿ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಸಚಿವರಿಗೆ ಗುರುವಾಯಾನಕೆರೆಯಲ್ಲಿ ಸಾರ್ವಜನಿಕರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ನೇತೃತ್ವದಲ್ಲಿ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆ ದುರಸ್ತಿ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಕೆಲವೊಂದು ಕಡೆ ಆಗಬೇಕಿರುವ ಬದಲಾವಣೆಗಳ ಬಗ್ಗೆ ಮನವಿ ಸಲ್ಲಿಸಿದರು, ಮನವಿಗೆ ಸ್ಪಂದಿಸಿದ ಸಚಿವರು ಸ್ಥಳದಲ್ಲೇ ಅಧಿಕಾರಿಗಳಿಗೆ ಶೀಘ್ರದಲ್ಲಿ ಪರಿಹರಿಸುವಂತೆ ಆದೇಶ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಗೋಪಿನಾಥ್ ನಾಯಕ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ವಿಶ್ವೇಶ್ ಕಿಣಿ, ದಿನೇಶ್ ಮೂಲ್ಯ ಕೊಂಡೆಮಾರ್, ಧನಂಜಯ್ ರಾವ್, ನಜೀರ್, ಶರೀಫ್, ಅಬ್ದುಲ್ ಕರೀಮ್, ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.