8:01 AM Wednesday26 - November 2025
ಬ್ರೇಕಿಂಗ್ ನ್ಯೂಸ್
ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ

ಇತ್ತೀಚಿನ ಸುದ್ದಿ

ರಾಯಿ ಸರಕಾರಿ ವಿದ್ಯಾಸಂಸ್ಥೆ: ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಮಾಹಿತಿ

13/11/2024, 22:04

ಬಂಟ್ವಾಳ(reporterkarnataka.com): ರಾಯಿ ಸರಕಾರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕ ಹಾಗೂ ಕನ್ನಡ ಮಾಧ್ಯಮದ ಸಾಧಕಗಳ ಕುರಿತು ಮಾಹಿತಿ ನೀಡಲಾಯಿತು.

ಬೆಂಗಳೂರು ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿಯ ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ಮಾಹಿತಿದಾರರಾಗಿ ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ಗ್ರಾಮೀಣ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗೆ ಸರಕಾರವು ಅತ್ಯುತ್ತಮವಾದಂತಹ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದು ಉಚಿತವಾಗಿ ದೊರಕುವ ಎಲ್ಲಾ ಸವಲತ್ತುಗಳೊಂದಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗದ ಸಂದರ್ಭದಲ್ಲಿ ಕನ್ನಡ ಮಾಧ್ಯಮಕ್ಕೆ ಮತ್ತು ಗ್ರಾಮೀಣ ಶಿಕ್ಷಣಕ್ಕೆ ಕೃಪಾಂಕ ನೀಡಿ ಪ್ರೋತ್ಸಾಹಿಸುತ್ತಿದೆ. ಸರಕಾರ ನೀಡುತ್ತಿರುವ ಈ ಎಲ್ಲ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಬದುಕನ್ನು ಬೆಳಗಿಸಿಕೊಳ್ಳಬೇಕೆಂದು ಹಲವಾರು ಉದಾಹರಣೆಗಳನ್ನು ನೀಡಿ ಮನವಿ ಮಾಡಿಕೊಂಡರು.
ಮುಖ್ಯ ಶಿಕ್ಷಕಿ ತನುಜ ಸ್ವಾಗತಿಸಿದರು. ಬಾಬಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು