1:20 PM Monday23 - December 2024
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು…

ಇತ್ತೀಚಿನ ಸುದ್ದಿ

ರಾಜಧಾನಿ ದೆಹಲಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ತಾಪಮಾನ: ಸುಡು ಬಿಸಿಲಿಗೆ ಜನರು ತತ್ತರ; ಯೆಲ್ಲೋ ಅಲರ್ಟ್ 

28/04/2022, 11:25

ಹೊಸದಿಲ್ಲಿ :(reporterkarnataka.com): ರಣಬಿಸಿಲ ಧಗೆಗೆ ರಾಷ್ಟ್ರ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. ಆ ಮೂಲಕ ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ದೆಹಲಿಯ ಸಫ್ದರ್‌ಜಂಗ್ ವೀಕ್ಷಣಾಲಯವು ಮಂಗಳವಾರ ಗರಿಷ್ಠ 40.8 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ದಾಖಲಿಸಿತ್ತು. ಇದು ಬುಧವಾರದಂದು 42 ಡಿಗ್ರಿ ಮಾರ್ಕ್ ಅನ್ನು ಮೀರುವ ನಿರೀಕ್ಷೆಯಿದೆ ಮತ್ತು ಗುರುವಾರದ ವೇಳೆಗೆ 44 ಡಿಗ್ರಿ ಸೆಲ್ಸಿಯಸ್‌ಗೆ ಏರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ದೆಹಲಿಯ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 46 ಡಿಗ್ರಿ ಸೆಲ್ಸಿಯಸ್‌ಗೆ ಏರಬಹುದು ಎಂದು ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಹಿಂದೆ ಏಪ್ರಿಲ್ 21, 2017 ರಂದು ರಾಜಧಾನಿಯಲ್ಲಿ ಗರಿಷ್ಠ ತಾಪಮಾನ 43.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಅಂತೆಯೇ ಏಪ್ರಿಲ್ 29, 1941 ರಂದು ತಿಂಗಳ ಸಾರ್ವಕಾಲಿಕ ಗರಿಷ್ಠ ತಾಪಮಾನವು 45.6 ಡಿಗ್ರಿ ಸೆಲ್ಸಿಯಸ್ ಆಗಿತ್ತು.

ಭಾರತೀಯ ಹವಾಮಾನ ಇಲಾಖೆ (IMD) ಹವಾಮಾನ ಇಲಾಖೆ ದೆಹಲಿಯಲ್ಲಿ ಇದೀಗ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ತಾಪಮಾನಕ್ಕೆ ಸಂಬಂಧಿಸಿದಂತೆ ಕ್ರಮಕ್ಕೆ ಸೂಚಿಸಿದೆ. ಶಾಖದ ಅಲೆಯು ಪೀಡಿತ ಪ್ರದೇಶಗಳಲ್ಲಿ ದುರ್ಬಲ ಜನರಿಗೆ – ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರಿಗೆ “ಮಧ್ಯಮ” ಆರೋಗ್ಯ ಕಾಳಜಿ ವಹಿಸಬೇಕು. ಎಲ್ಲೋ ಅಲರ್ಟ್ ಘೋಷಿತ ಪ್ರದೇಶಗಳಲ್ಲಿ ಜನರು ಶಾಖಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸಬೇಕು, ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಬೇಕು ಮತ್ತು ಬಟ್ಟೆ, ಟೋಪಿ ಅಥವಾ ಛತ್ರಿ ಇತ್ಯಾದಿಗಳನ್ನು ಬಳಸಿ ತಲೆಯನ್ನು ಮುಚ್ಚಬೇಕು ಎಂದು ಐಎಂಡಿ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು