4:18 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ 6 ಸಾವಿರ ಅಡಿ ಆಳದ ಕಂದಕದಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ

09/12/2023, 19:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.
ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳಕ್ಕೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಯುವಕ ಬೆಟ್ಟದಿಂದ ಪ್ರಪಾತಕ್ಕೆ ನಗೆದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಊಹಿಸಲಾಗಿದೆ. ಬೆಂಗಳೂರು ಮೂಲದ ಭರತ್ (30 ) ಸಾವಿಗೀಡಾಗಿರುವ ಯುವಕ. ಡಿಸೆಂಬರ್ 6ರಂದು ಬೆಂಗಳೂರಿನಿಂದ ದುರ್ಗದಹಳ್ಳಿ ಸಮೀಪದ ರಾಣಿಝರಿಗೆ ಟ್ರಕ್ಕಿಂಗ್ ಎಂದು ಬಂದಿದ್ದ ಯುವಕ ನಾಪತ್ತೆಯಾಗಿದ್ದ. ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ನಾಟ್ ರೀಚಬಲ್ ಆಗಿತ್ತು. ರಾಣಿಝರಿ ಬಳಿ ಯುವಕನ ಬೈಕ್ ನಿಲ್ಲಿಸಲಾಗಿತ್ತು. ಬೈಕ್ ಬಳಿಯಲ್ಲಿ ಮೊಬೈಲ್, ಟೀ ಶರ್ಟ್, ಚಪ್ಪಲಿ ಸಿಕ್ಕಿದ್ದವು. ಬೈಕ್ ಗೆ ಐಡಿ ಕಾರ್ಡ್ ಮತ್ತು ಬ್ಯಾಗ್ ಸಿಕ್ಕಿಸಿ ನಾಪತ್ತೆಯಾಗಿದ್ದ.


ಶುಕ್ರವಾರ ಬೆಂಗಳೂರಿನಿಂದ ಅವರ ಕುಟುಂಬದವರು ಆಗಮಿಸಿದ್ದರು. ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿ ಇಂದು ಬೆಳಿಗ್ಗೆಯಿಂದ ಯುವಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಧರ್ಮಸ್ಥಳ ವಿಪತ್ತು ನಿರ್ವಹಣ ತಂಡ, ಬಣಕಲ್ ಸಮಾಜ ಸೇವಕ ಆರೀಫ್ ಮತ್ತು ಅವರ ಸ್ನೇಹಿತರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಏಳೆಂಟು ಡ್ರೋಣ್ ಕ್ಯಾಮರಗಳನ್ನು ಬಳಸಿಯೂ ಶೋಧ ನಡೆಸಲಾಗಿತ್ತು. ಇಂದು ಮಧ್ಯಾಹ್ನದ ಹೊತ್ತಿಗೆ ಯುವಕ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಶೋಧ ಕಾರ್ಯ ನಡೆಸುತ್ತಿದ್ದ ತಂಡ ಸುಮಾರು 25 ಮಂದಿಯ ತಂಡ ಮೈದಾಡಿ ಕಡೆಯಿಂದ ಬೆಟ್ಟವನ್ನು ಇಳಿದು ಬೆಳ್ತಂಗಡಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಶವವನ್ನು ಪತ್ತೆ ಹಚ್ಚಿದೆ. ಸುಮಾರು ನಾಲ್ಕು ಸಾವಿರ ಅಡಿಯಿಂದ ಯುವಕ ಕೆಳಗೆ ಬಿದ್ದಿದ್ದು, ಆತನ ದೇಹ ಛಿದ್ರವಾಗಿದ್ದು, ಕೊಳೆತ ಸ್ಥಿತಿಗೆ ತಲುಪಿದೆ ಎಂದು ತಿಳಿದುಬಂದಿದೆ.
ವ್ಯೂ ಪಾಯಿಂಟ್ ನಿಂದ ಹಾರಿ ಆತ್ಮಹತ್ಯೆ ?: ರಾಣಿಝರಿ ಸಮೀಪದಲ್ಲಿರುವ ವ್ಯೂ ಪಾಯಿಂಟ್ ನಿಂದಲೇ ಯುವಕ ಕೆಳಗೆ ಹಾರಿರುವ ಸಾಧ್ಯತೆಯಿದೆ ಎನ್ನಲಾಗಿದೆ. ವ್ಯೂ ಪಾಯಿಂಟ್ ನೇರದಲ್ಲಿಯೇ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ. 
ಭರತ್ ಇಂಜಿನಿಯರ್ ಪದವೀದರನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು