12:34 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ರಾಯಚೂರು: 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್  ವಿಸ್ತರಣೆ; ಜಿಲ್ಲಾಧಿಕಾರಿ ಆದೇಶ

19/05/2021, 11:12

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನಿರ್ದೇಶನ ನೀಡಿರುವ ಕಾರಣ ಮೇ 19ರಿಂದ 22ರವರೆಗೆ ಮತ್ತೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ರಾಯಚೂರು ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು ನಿಯಂತ್ರಣಕ್ಕೆ ಬಾರದೇ ಇರುವ ಹಿನ್ನೆಲೆಯಲ್ಲಿ ಈ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಅಗತ್ಯ ವಸ್ತುಗಳಾದ ನೀರು, ಹಾಲು ಮಾರಾಟ, ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಅಂಬುಲೆನ್ಸ್, ಅಗ್ನಿ ಶಾಮಕ, ವಿದ್ಯುತ್, ಪೆಟ್ರೋಲ್ ಪಂಪ್, ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಚಟುವಟಿಕೆಗಳನ್ನು ದಿನಾಂಕ: 19-05-2021 ಮದ್ಯಾಹ್ನ 12-00 ಗಂಟೆಯಿಂದ 22-05-2021ರಂದು ರಾತ್ರಿ 12.00 ಗಂಟೆವರೆಗೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

19ರಂದು ಬೆಳಗ್ಗೆ 6.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ಅಗತ್ಯ ವಸ್ತುಗಳಾದ ನೀರು, ಹಾಲು, ಹಣ್ಣು, ಕಿರಾಣಿ ಅಂಗಡಿ, ತರಕಾರಿ, ಮಾಂಸ ಮಾರಾಟ ಮಾಡಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವಲ್ಲಿ ಸಹಕರಿಸಲು ಸಾರ್ವಜನಿಕರಲ್ಲಿ ಕೋರಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು