5:04 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪಾಂಡೇಶ್ವರದ ಕಾಲೇಜಿನಲ್ಲಿ ರ‍್ಯಾಗಿಂಗ್: ಇಬ್ಬರು ಕಿರಿಯ ವಿದ್ಯಾರ್ಥಿಗಳಿಗೆ 6 ಮಂದಿ ಹಿರಿಯ ವಿದ್ಯಾರ್ಥಿಗಳಿಂದ ಹಲ್ಲೆ

06/08/2026, 19:43

ಮಂಗಳೂರು(reporterkarnataka.com): ನಗರದ ಪಾಂಡೇಶ್ವರದ ಕಾಲೇಜಿವೊಂದರಲ್ಲಿ ರ‍್ಯಾಗಿಂಗ್ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ.
ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಆರು ಮಂದಿ ಹಿರಿಯ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ ಮತ್ತು ಜಾಸಿನ್ ಮೇಲೆ ದ್ವಿತೀಯ ವರ್ಷದ ಲಾಜೆಸ್ಟಿಕ್ ವಿಭಾಗದ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಇಬ್ಬರೂ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ.

*ಮೇಲ್ನೋಟಕ್ಕೆ ರ‍್ಯಾಗಿಂಗ್*
ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಗುಜ್ಜರಕೆರೆ ಚಹಾ ಅಂಗಡಿ ಬಳಿ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ 2ನೇ ವರ್ಷದ 4 ರಿಂದ 6 ವಿದ್ಯಾರ್ಥಿಗಳು ಹಲ್ಲೆ ನಡೆಸಿರುವುದು ವರದಿಯಾಗಿದೆ. ಮೇಲ್ನೋಟಕ್ಕೆ ಇದೊಂದು ರ‍್ಯಾಗಿಂಗ್ ಘಟನೆಯಂತೆ ಕಂಡುಬರುತ್ತಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ವಿದ್ಯಾರ್ಥಿಗಳಿಂದ ಪ್ರಸ್ತುತ ಹೇಳಿಕೆ ದಾಖಲಿಸಿಕೊಳ್ಳಲಾಗುತ್ತಿದೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಸಮಗ್ರ ತನಿಖೆ ನಡೆಸಲಾಗುವುದು. ತನಿಖೆಯ ನಂತರವೇ ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು ಆಸ್ಪತ್ರೆಗೆ ತೆರಳಿ ವಿಚಾರಣೆ ನಡೆಸುತ್ತಿದ್ದು, ತನಿಖೆ ಚುರುಕುಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು