3:17 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ರಾಘವೇಶ್ವರ ಸ್ವಾಮೀಜಿ ಚಾತುರ್ಮಾಸ್ಯ: ಭಾಷಾ ಕಾಣಿಕೆ ಸಮರ್ಪಿಸಿ ಆದರ್ಶ ಮೆರೆದ ಭಂಡಾರಿ ಸಮಾಜದ ವಿದ್ಯಾರ್ಥಿ

23/07/2025, 17:57

ಗೋಕರ್ಣ(reporterkarnataka.com): ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಅಶೋಕೆಯಲ್ಲಿ ಕೈಗೊಂಡಿರುವ ಸ್ವಭಾಷಾ ಚಾತುರ್ಮಾಸ್ಯದ ವೇಳೆ ಭಂಡಾರಿ ಸಮಾಜದ ವಿದ್ಯಾರ್ಥಿಯೊಬ್ಬರು ಭಾಷಾ ಕಾಣಿಕೆ ಸಮರ್ಪಿಸಿದರು. ಯಾವುದೇ ಸಮಾಜ ಬಾಂಧವರು ಕನ್ನಡ ಮಾತನಾಡುವ ವೇಳೆ ಬಳಸಿದ ಪ್ರತಿ ಇಂಗ್ಲಿಷ್ ಶಬ್ದಕ್ಕೆ ತಪ್ಪುಕಾಣಿಕೆ ತೆಗೆದಿಟ್ಟು ಭಾಷಾಕಾಣಿಕೆ ರೂಪದಲ್ಲಿ ಸಮರ್ಪಿಸಿರುವುದು ಇದೇ ಮೊದಲು.
ಸ್ವಭಾಷೆಯ ಬಗ್ಗೆ ಅರಿವು ಮತ್ತು ಆತ್ಮಾಭಿಮಾನ ಮೂಡಿಸುವ ಉದ್ದೇಶದಿಂದ ಚಾತುರ್ಮಾಸ್ಯ ಕೈಗೊಳ್ಳುವ ಪೂರ್ವಭಾವಿಯಾಗಿ ಶ್ರೀಗಳು, ಕನ್ನಡದಲ್ಲಿ ಇತರ ಭಾಷೆಗಳನ್ನು ಮಿಶ್ರ ಮಾಡದಂತೆ ಕರೆ ನೀಡಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿ ಬಿಎಂಶ್ರೀಯವರು ಕನ್ನಡ ಉಳಿಸುವ ನಿಟ್ಟಿನಲ್ಲಿ ಕೈಗೊಂಡ ಕ್ರಮವನ್ನು ಉಲ್ಲೇಖಿಸಿದ ಶ್ರೀಗಳು, ನಾವು ಕನ್ನಡ ಮಾತನಾಡುವ ವೇಳೆ ಬಳಸುವ ಪ್ರತಿಯೊಂದು ಇಂಗ್ಲಿಷ್ ಪದಕ್ಕೆ ಒಂದು ನಿರ್ದಿಷ್ಟ ದಂಡಮೊತ್ತವನ್ನು ತೆಗೆದಿಟ್ಟು ಸಮರ್ಪಿಸುವಂತೆ ಸಲಹೆ ಮಾಡಿದ್ದರು. ಆ ಮೂಲಕ ಸ್ವಭಾಷೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನಕ್ಕೆ ಕೈಜೋಡಿಸೋಣ ಎಂದು ಕರೆ ನೀಡಿದ್ದರು.
ಶ್ರೀಗಳು ಬೆಂಗಳೂರಿನಲ್ಲಿ ನೀಡಿದ ಆಶೀರ್ವಚನದ ಯೂ-ಟ್ಯೂಬ್ ಅವತರಣಿಕೆಯನ್ನು ವೀಕ್ಷಿಸಿದ ಕುಮಟಾ ಎ.ವಿ.ಬಾಳಿಗಾ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿ ಶ್ರೀಧರ ಮಂಜುನಾಥ ಭಂಡಾರಿ, ಆ ಬಳಿಕ ಕನ್ನಡದಲ್ಲೇ ಮಾತನಾಡುವ ಪಣತೊಟ್ಟು, ಮಾತನಾಡುವ ವೇಳೆ ಗಮನಕ್ಕೆ ಬಂದ ಇಂಗ್ಲಿಷ್ ಪದಗಳಿಗೆ ನಿರ್ದಿಷ್ಟ ಮೊತ್ತದ ತಪ್ಪುಕಾಣಿಕೆ ತೆಗೆದಿಟ್ಟು, ಮಂಗಳವಾರ ಸಮಾಜದ ಸ್ವರ್ಣಪಾದುಕೆ ಪೂಜೆ ಸಂದರ್ಭದಲ್ಲಿ ಭಾಷಾಕಾಣಿಕೆ ಸಮರ್ಪಿಸಿ ಆದರ್ಶ ಮೆರೆದರು.
ಸ್ವರ್ಣಪಾದುಕೆ ಪೂಜೆ ನೆರವೇರಿಸಿದ ಭಂಡಾರಿ ಸಮಾಜದ ಎಲ್ಲ ಮನೆಗಳಿಗೆ ವಿತರಿಸಲು ಶ್ರೀಗಳು ಸಮಾಜದ ಮುಖಂಡರಿಗೆ ಸಮಷ್ಟಿ ಮಂತ್ರಾಕ್ಷತೆ ಅನುಗ್ರಹಿಸಿದರು. ಭಂಡಾರಿ ಸಮಾಜದ ಅಧ್ಯಕ್ಷ ಶಿವ ಭಂಡಾರಿ, ಉಪಾಧ್ಯಕ್ಷ ನಾರಾಯಣ ಎಸ್. ಭಂಡಾರಿ, ವಿನಾಯಕ ಎಂ.ಭಂಡಾರಿ, ಹರಿಹರ ಎಸ್.ಭಂಡಾರಿ, ರವಿ ಎಂ.ಭಂಡಾರಿ ಮತ್ತಿತರರು ನೇತೃತ್ವ ವಹಿಸಿದ್ದರು. ಸರ್ವ ಸಮಾಜಗಳ ಸಂಯೋಜಕರಾದ ಕೆ.ಎನ್.ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜಿ.ಪ್ರಸನ್ನಕುಮಾರ್, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ಸಂದರ್ಭದಲ್ಲಿ ಮಂಗಳವಾರ ಶತರುದ್ರ ಮತ್ತು ಸರ್ಪಸೂಕ್ತ ಹವನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು