1:06 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ರಘು ಇಡ್ಕಿದು ಅವರ ‘ನೆತ್ತರು ಮತ್ತು ಮೌನದೊಳಗೊಂದು ಚಿತ್ರ’ ಕವನ ಸಂಕಲನ ಲೋಕಾರ್ಪಣೆ

22/11/2021, 18:19

ಮಂಗಳೂರು (reporterkarnataka.com)

ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವಿದ್ಯಾ ಪ್ರಕಾಶನ ಮಂಗಳೂರು ಸಂಯುಕ್ತ ಆಶ್ರಯದಲ್ಲಿ ರಘು ಇಡ್ಕಿದು ಅವರ 24ನೇ ಕೃತಿ ನೆತ್ತರು ಮತ್ತು ಮೌನದೊಳಗೊಂದು ಚಿತ್ರ ಕವನ ಸಂಕಲನದ ಬಿಡುಗಡೆ ಸಮಾರಂಭ ಸೋಮವಾರ ಡಾನ್ ಬಾಸ್ಕೊ ಹಾಲ್‌ನಲ್ಲಿ ನಡೆಯಿತು.

ಸಂಶೋಧಕ, ವಿಮರ್ಶಕ, ಕವಿಗಳಾದ ಡಾ.ರಾಧಾಕೃಷ್ಣ ಎನ್.ಬೆಳ್ಳೂರು ಕೃತಿ ಬಿಡುಗಡೆಗೊಳಿಸಿದರು. ಹಿರಿಯ ಕವಿ ರಾಧಾಕೃಷ್ಣ ಉಳಿಯತಡ್ಕ ಅಧ್ಯಕ್ಷತೆ ವಹಿಸಿದ್ದರು. ಸುರತ್ಕಲ್ ಗೋವಿಂದಾಸ ಕಾಲೇಜ್‌ನ ಪ್ರಿನ್ಸಿಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಕಾ.ವಿ.ಕೃಷ್ಣದಾಸ್ ಉಪಸ್ಥಿತರಿದ್ದರು.

ಶೈಲಜಾ ಪುದುಕೋಳಿ, ಯೋಗೀಶ್ ಮಲ್ಲಿಗೆ ಮಾಡು, ಡೊಂಬಯ್ಯ ಇಡ್ಕಿದು ಕವನ ವಾಚನ ಮಾಡಿ ಪ್ರತಿಕ್ರಿಯೆ ನೀಡಿದರು.

ವಿಜಯಲಕ್ಷ್ಮೀ ಕಟೀಲು ಕಾರ್ಯಕ್ರಮ ನಿರೂಪಿಸಿದರು. ಸುಬ್ರಾಯ ಭಟ್ ಸ್ವಾಗತಿಸಿ ಲತೀಶ್ ಸಂಕೊಳಿಗೆ ವಂದಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು