12:01 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3 ಡಿಮ್ಯಾಂಡ್​ಗಳನ್ನಿಟ್ಟ ಪ್ರತಿಪಕ್ಷ ನಾಯಕ

22/07/2026, 21:38

ನವದೆಹಲಿ(reporterkarnataka.com): ನೀಟ್ ಪರೀಕ್ಷೆ ಅಕ್ರಮ ಮತ್ತು ಸಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನ ಬಲವಂತವಾಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನ ಖಂಡಿಸಿ ಇಂದು ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಸುದ್ದಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

*ರಾಹುಲ್​ ಗಾಂಧಿ ಹೇಳಿದ್ದೇನು?*
ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ, ಪ್ರತಿ ತಿಂಗಳು ಸರಿಸುಮಾರು ಒಂದಲ್ಲ ಒಂದು ಪತ್ರಿಕೆ ಸೋರಿಕೆಯಾಗುತ್ತಲೇ ಇದೆ. ಪೇಪರ್​ ಲೀಕ್ ಘಟನೆ ಸುಮಾರು 7.5 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಆದ್ರೆ, ಕಳೆದ ದಶಕದಲ್ಲಿ ಯಾವುದೇ ಶಿಕ್ಷೆ ಇಲ್ಲ. ಒಂದು ಗುಂಪಿನ ಜನರು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ. ನಮ್ಮ ಯುವಕರು ಪ್ರತಿಭಟಿಸುತ್ತಿರುವುದಕ್ಕೆ ಇದೇ ಕಾರಣ. ಕಳೆದ ದಶಕದಲ್ಲಿ ಕನಿಷ್ಠ 152 ಪತ್ರಿಕೆ ಸೋರಿಕೆಯಾಗಿದೆ ಎಂದು ರಾಹುಲ್​ ಗಾಂಧಿ ಆರೋಪ ಮಾಡಿದ್ರು.

ಇತ್ತೀಚಿನ ಸುದ್ದಿ

ಜಾಹೀರಾತು