4:44 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ರಾಹುಲ್ ಗಾಂಧಿ  ಪ್ರಚಾರ ಮಾಡಿದ್ದಲೆಲ್ಲ ಕಮಲ ಅರಳಲಿದೆ: ಮುಖ್ಯಮಂತ್ರಿ ಬೊಮ್ಮಾಯಿ

25/09/2022, 22:47

ಮೈಸೂರು(reporterkarnataka.com):ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಲ್ಲೆಲ್ಲಿ ಹೋಗಿ ಪ್ರಚಾರ ಮಾಡಿದ್ದರೋ ಅಲ್ಲೆಲ್ಲ ಕಮಲ ಅರಳಿದೆ. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಮಾಡಲು ಬಂದರೆ ಇಲ್ಲೂ ಸಹ ಕಮಲ ಅರಳುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಇಂದು ಮಾತನಾಡಿದ ಅವರು, ನಾಳೆ ನಡೆಯಲಿರುವ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಮೈಸೂರಿಗೆ ಬಂದಿದ್ದೇನೆ. ನಾಡಿನ ಸಮಸ್ತ ಜನರಿಗೆ ದಸರಾ ಹಬ್ಬದ ಶುಭಾಶಯಗಳು. ದಸರಾ ಹಬ್ಬದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.

ಇದೇ ವೇಳೆ ಕಾಂಗ್ರೆಸ್‌ನ ಪೇಸಿಎಂ ಅಭಿಯಾನ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅವಧಿಯಲ್ಲಿ ಸರಣಿ ಹಗರಣಗಳಾಗಿವೆ. ಅವರು ಈ ರೀತಿ ಪ್ರಚಾರ ಮಾಡಿಕೊಂಡು ಹೋಗಲಿ. ಡರ್ಟಿ ಪಾಲಿಟಿಕ್ಸ್‌ನಿಂದಲೇ ಕಾಂಗ್ರೆಸ್ ಅಧಃಪತನದತ್ತ ಸಾಗುತ್ತಿದೆ. ರಾಜ್ಯದ ಮರ್ಯಾದೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ ಎಂದು ಟೀಕಿಸಿದರು. ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಅಭಿಯಾನ ಆಗಮಿಸುತ್ತಿದ್ದು, ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿದ್ದಾರೆ. ಅವರು ಬಂದು ಹೋದರೆ ನಮಗೆ ನಷ್ಟ ಹಾಗೂ ತೊಂದರೆ ಇಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು