8:48 PM Wednesday30 - October 2024
ಬ್ರೇಕಿಂಗ್ ನ್ಯೂಸ್
ಪಿಎಲ್ಐ ಯೋಜನೆಯಡಿ ಮೆರಿಲ್ ಸುಧಾರಿತ ಉತ್ಪಾದನಾ ಸೌಲಭ್ಯ: ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಜಿ ಸಂಸದ ದ್ರುವನಾರಾಯಣ್ ಸ್ಮರಣಾರ್ಥ ಆಶ್ರಯ ಚಾರಿಟೀಸ್ ವತಿಯಿಂದ ಬಡಬಗ್ಗರಿಗೆ ವಿವಿಧ ಸವಲತ್ತು… ಅಧ್ಯಯನ ಪ್ರವಾಸ: ದಕ್ಷಿಣ ಕೊರಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ; ಶಿಕ್ಷಣ, ಆರೋಗ್ಯ, ವ್ಯಾಪಾರ… ರಾಜ್ಯ ಸರಕಾರಿ ನೌಕರರ ಸಂಘದ ನಂಜನಗೂಡು ಶಾಖೆ ಚುನಾವಣೆಗೆ ಕೋರ್ಟ್ ತಡೆಯಾಜ್ಞೆ ಗ್ರಾಮ ಪಂಚಾಯಿತಿ ಸದಸ್ಯೆಯ ಪತಿಯ ಕೊಲೆ ಪ್ರಕರಣ: ಉಪ್ಪಾರ ಸಮಾಜದಿಂದ ವಿಶೇಷ ಸಭೆ;… ಯುವತಿ ಆತ್ಮಹತ್ಯೆ ಯತ್ನಕ್ಕೆ ಪೊಲೀಸ್ ಇಲಾಖೆ ವೈಫಲ್ಯ ಕಾರಣ: ಶಾಸಕ ಡಾ. ಭರತ್… ಬೆಳಗಾವಿಯಲ್ಲಿ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆ ಆಚರಿಸಲು ಅವಕಾಶ ಬೇಡ: ಕರವೇ ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ ಬೇಲೆಕೇರಿ ಬಂದರಿನಿಂದ 11,312 ಮೆಟ್ರಿಕ್ ಟನ್ ಅದಿರು ನಾಪತ್ತೆ ಪ್ರಕರಣ: ಸಿಬಿಐನಿಂದ ಕಾಂಗ್ರೆಸ್… ಬರೋಬ್ಬರಿ 16 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು…

ಇತ್ತೀಚಿನ ಸುದ್ದಿ

ರಾಹುಲ್ ಹುಟ್ಟುಹಬ್ಬ: ಕಾಂಗ್ರೆಸ್ ನಿಂದ ಪೌರ ಕಾರ್ಮಿಕರಿಗೆ ಪಾದಪೂಜೆ, ಆಹಾರ ಕಿಟ್ ವಿತರಣೆ

19/06/2021, 16:17

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಅಂಗವಾಗಿ ಅಥಣಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೌರ ಕಾರ್ಮಿಕರಿಗೆ ಪಾದ ಪೂಜೆ ಕಾರ್ಯಕ್ರಮ ಅಥಣಿ ತಾಲೂಕಿನ ಪುರಸಭೆಯ ಸಭಾಭವನದಲ್ಲಿ 
ಇಂದು ನಡೆಯಿತು.

ಬ್ಲಾಕ್ ಅಧ್ಯಕ್ಷ ಸಿದ್ದಾರ್ಥ್ ಶಿಂಗೆ ಅವರು ಪಾದ ಪೂಜಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಸ್ವಂತ ಖರ್ಚಿನಲ್ಲಿ ಆಹಾರ ಕಿಟ್ ವಿತರಿಸಿದರು.


ನಂತರ ಮಾತನಾಡಿದ ಅವರು, ಪೌರಕಾರ್ಮಿಕರು ಕೊರೊನಾ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಸೇವೆ ಮಾಡಿದ್ದಾರೆ. ಅವರ ಸೇವೆಯನ್ನು ಯಾವ ಕಾಲಕ್ಕೂ ಮರಿಯ ಬಾರದು ಎಂದು ಹೇಳಿದರು.ತಾಲೂಕಿನಲ್ಲಿ ಒಟ್ಟು 74 ಪೌರಕಾರ್ಮಿಕರಿಗೆ ಗೌರವ ಪ್ರಮಾಣ ಪತ್ರವನ್ನು ನೀಡಲಾಯಿತು. ನಂತರ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ನಿಮಿತ್ತ ಕೇಕ್ ಕಟ್ ಮಾಡಲಾಯಿತು.


ಈ ಸಂದರ್ಭದಲ್ಲಿ ರಮೇಶ್ ಸಿಂಧಗಿ, ರಾವಸಾಬ್ ಐಹೊಳೆ, ಅನಿಲ್ ಸುನದೊಳಿ, ಸಂಜು ಕಾಂಬಳೆ ಸುನಿತಾ ಐಹೊಳೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ಈ ಎಲ್ಲ ಕಾರ್ಯಕ್ರಮವನ್ನು ಸಂಜು ಕಾಂಬಳೆ ಅವರು ನೆರವೇರಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು