9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ನಳಿನ್ ಹೇಳಿಕೆ: ಕಾರ್ಕಳ, ಹೆಬ್ರಿ ಕಾಂಗ್ರೆಸ್ ನಿಂದ ಖಂಡನಾ ನಿರ್ಣಯ ಅಂಗೀಕಾರ

21/10/2021, 16:58

ಕಾರ್ಕಳ(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ದುರುದ್ದೇಶಪೂರಿತ ಅವಹೇಳನಕಾರೀ ಹೇಳಿಕೆ ನೀಡಿ ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಇಲ್ಲಿನ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಅಧ್ಯಕ್ಷತೆಯಲ್ಲಿ ನಡೆದ ಹೆಬ್ರಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

 ಇತಿಹಾಸ ತಿಳಿಯದವರಿಂದ ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ತನ್ನ ನೈಜ ಯೋಗ್ಯತೆಗೆ ಮಿಕ್ಕಿದ ಹುದ್ದೆಯ ಅಮಲಿನಲ್ಲಿ ಜಗತ್ತೆಲ್ಲ ಡ್ರಗ್ ಎಡಿಕ್ಟ್ ಆದಂತೆ ಕಾಣುವ ಅಪ್ರಬುದ್ಧ ಮನಸ್ಥಿತಿಯ ಬಿಜೆಪಿ ರಾಜ್ಯಾದ್ಯಕ್ಷರಿಗೆ ನೆಹರೂ ಕುಟುಂಬದ ಹಿನ್ನೆಲೆ ತಿಳಿದಿಲ್ಲ.  ಮಹಾತ್ಮಾ ಗಾಂಧೀ ತತ್ವ ಸಿದ್ಧಾಂತದಡಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ಪ್ರಜಾತಂತ್ರಕ್ಕೊಪ್ಪುವ ರಾಜನೀತಿಯ ನಡೆಯ, ಓಕ್ಸ್ವಡ್೯ ಶಿಕ್ಷಣ ಪಡೆದ ರಾಹುಲ್ ಗಾಂಧಿಯನ್ನು ಅರ್ಥ ಮಾಡಿಕೊಳ್ಳುವ ಶಕ್ತಿಯೂ ಈ ಕಟೀಲಿಗಿಲ್ಲ. ಇಂತಹ ಬೇಜವಾಬ್ಧಾರಿ  ಹೇಳಿಕೆಗಳು ಮುಂದುವರಿದಲ್ಲಿ ಇವರ ವಿರುದ್ಧ ಕಾನೂನಾತ್ಮಕ ಕ್ರಮ  ಕೈಗೊಳ್ಳಲಾಗುತ್ತದೆ ಎನ್ನುವ  ಖಂಡನಾ ನಿರ್ಣಯವನ್ನು ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ಸಮಕ್ಷಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಂಡಿಸಿದರು. 

ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ ಅನುಮೋದಿಸಿದರು. ಜಿಲ್ಲಾ ಉಪಾಧ್ಯಕ್ಷ  ಸುಧಾಕರ ಕೋಟ್ಯಾನ್, ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ  ದೀಪಕ್ ಕೋಟ್ಯಾನ್, ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಲೂ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು