4:47 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಪ್ರತಿಭಟನೆ

03/07/2026, 16:46

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಇತ್ತೀಚೆಗಷ್ಟೇ ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮದಲ್ಲಿ ಅತಿಥಿ ಶಿಕ್ಷಕರಾದ ವೀರನಗೌಡ ರವರು ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಹಿನ್ನೆಲೆ ಯಲ್ಲಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ವಾಗಿ
ಮಸ್ಕಿ ತಾಲೂಕಿನಲ್ಲಿ ವಿವಿಧ ಶಾಲೆಯ ಅತಿಥಿ ಶಿಕ್ಷಕರು ಪ್ರತಿಭಟನೆ ಮಾಡಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ನೇತೃತ್ವದಲ್ಲಿ
ಮಸ್ಕಿ ಪಟ್ಟಣದಲ್ಲಿ ಇಂದು ಹಮ್ಮಿಕೊಂಡಿದ್ದ ‘ಬೃಹತ್ ಆಕ್ರೋಶದ ಮುಷ್ಕರ’ ಸರ್ಕಾರದ ದ್ವಂದ್ವ ನೀತಿಯ ವಿರುದ್ಧದ ಜನಾಂದೋಲನದಂತೆ ಕಂಡು ಬಂತು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಶಿಕ್ಷಕರು, ಪಟ್ಟಣದ ಪ್ರಮುಖ ವೃತ್ತಗಳ ಮೂಲಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದರು.ಸರ್ಕಾರದ ಕಣ್ಣು ತೆರೆಸಲು ಶಿಕ್ಷಕರು ಮಂಡಿಸಿದ
*ಪ್ರಮುಖ ಬೇಡಿಕೆಗಳು:* 12 ತಿಂಗಳ ನಿರಂತರ ಸೇವೆ:
ಕೇವಲ 9-10 ತಿಂಗಳ ತಾತ್ಕಾಲಿಕ ವ್ಯವಸ್ಥೆ ರದ್ದಾಗಲಿ; ವರ್ಷಪೂರ್ತಿ
ಸೇವಾ ಭದ್ರತೆ ಸಿಗಲಿ., ಗೌರವಯುತ ವೇತನ, ಇಂದಿನ ಬೆಲೆ ಏರಿಕೆಗೆ ತಕ್ಕಂತೆ ಗೌರವಧನವನ್ನು ಕನಿಷ್ಠ ₹25,000 ಕ್ಕೆ ಹೆಚ್ಚಿಸಬೇಕು, ತಿಂಗಳ ಮೊದಲ ವಾರದಲ್ಲೇ ವೇತನ,ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಜಮೆಯಾಗಬೇಕು.ಕೃಪಾಂಕದ ಸೌಲಭ್ಯbನೀಡಬೇಕು ಎಂದು ಸರಕಾರಕ್ಕೆ ತಹಶಿಲ್ದಾರರ ಮೂಲಕ ಮನವಿಯನ್ನು ಸಲ್ಲಿಸಿದ್ದರು.
ಈ ವೇಳೆ ಮಸ್ಕಿ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರು ಇದ್ದರು.

.

ಇತ್ತೀಚಿನ ಸುದ್ದಿ

ಜಾಹೀರಾತು