4:39 AM Friday16 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

Raichuru | ಮಸ್ಕಿ ಮನೆ ಕಳ್ಳತನ ಪ್ರಕರಣ: ಆರೋಪಿ ಬಂಧನ; 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

03/11/2025, 20:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಕಂಬಳಿ ಮಠದ ಪ್ರದೇಶದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಯನ್ನು ವಶಕ್ಕೆ ಪಡೆದು 2.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಶೈಲಮ್ಮ ಎಂಬುವರ ಮನೆ ಕಳ್ಳತನ ಪ್ರಕರಣ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಯಚೂರು ಜಿಲ್ಲಾ ಪೊಲೀಸ್ ಆಯುಕ್ತ ಪುಟ್ಟ ಮಾದಯ್ಯ ಮಾರ್ಗದರ್ಶನದಲ್ಲಿ ಸಿಪಾಯಿ ಬಾಲಚಂದ್ರ ಡಿ ಲಕ್ಕಮ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಯಿತು. ತಂಡದಲ್ಲಿ ಪಿಎಸ್ಐ ರಂಗಯ್ಯ ಕೆ ಸಿ ಪಿ ಐ ಜೆಡೆಪ್ಪ ಸಾಬುದ್ದೀನ್ ಅಡಿವೆಪ್ಪ ಸಿ ಎಚ್ ಸಿ ಸಿದ್ದಾರೆಡ್ಡಿ ಕಾರ್ಯಾಚರಣೆ ನಡೆಸಿ ಆರೋಪಿ. ಶಿವರಾಜ್ ಸುಂಕನೂರ್ ಎಂಬ ತನ ವಶಕ್ಕೆ ಪಡೆದ್ದಾರೆ. ವಿಚಾರಣೆ ವೇಳೆ ಆರೋಪಿಯಿಂದ 10 ಗ್ರಾಂ ಗುಂಡಿನ ಸರ 10 ಗ್ರಾಮ ಎಳೆ ಸರ, ಅಮ್ಮೂರು ಗ್ರಾಂ ತಾಳಿ ಸರ, 100 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಒಟ್ಟು 2.80000 ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು