4:01 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Raichuru | ಮಸ್ಕಿ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ, 3.24 ಲಕ್ಷ ರೂ. ದಂಡ

09/10/2025, 19:13

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಮಸ್ಕಿ ರಾಯಚೂರು

info.reporterkarnataka@gmail.com

ಜಮೀನಿಗೆ ಹೋಗಲು ದಾರಿ ಕೊಡದೆ ಇರುವುದರ ವಿಚಾರವಾಗಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನಗರದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿದೆ.
ಬಳಗಾನೂರ ಪೊಲೀಸ್ ಠಾಣೆ ವ್ಯಾಪ್ತಿಯ ಬರುವ ರಂಗಾಪುರ ಸರ್ವೇ ನಂಬರ್ 07ರಲ್ಲಿ
ಮೃತ ಶಿವರುದ್ರಪ್ಪ ಅವರ ಜಮೀನಿಗೆ ಹೋಗಲು ಆರೋಪಿತರು ದಾರಿ ರಸ್ತೆ ಕೊಡದೆ ಇದ್ದಿದ್ದರಿಂದ ಮೃತ ಶಿವರುದ್ರಪ್ಪನನ್ನು ತಮ್ಮ ಹೊಲದಿಂದ ಆರೋಪಿತರ ಹೊಲಕ್ಕೆ ಹೋಗುತ್ತಿದ್ದ ಕಾಲುವೆ ನೀರನ್ನು ಬಂದು ಮಾಡಿರುವುದರಿಂದ ಅದೇ ದ್ವೇಷದ ಹಿನ್ನೆಲೆಯಲ್ಲಿ..
ಆರೋಪಿತರು ಕೊಡಲೇ ಬಡಿಗೆಗಳನ್ನು ಹಿಡಿದು ಜಮೀನಿನಲ್ಲಿ ಅತಿಕ್ರಮಣವಾಗಿ ಪ್ರವೇಶ ಮಾಡಿ ಜಗಳ ತೆಗೆದು ಕೊಡಲಿ ಕಾವಿನಿಂದ ಮತ್ತು ಬಡಿಗೆಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ದೂರದ ವಿರುದ್ಧ ಬೆಳಗನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಬಿ. ಜಕಾತಿ ಸಿಂಧನೂರ್ ಅವರ ಪ್ರಕರಣ ವಾದಗಳನ್ನು ಆಲಿಸಿದ ಮೂರನೆಯ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿತರು ಅಪರಾಧ ಎಸಿಗಿದ್ದಾರೆಂದು ಪರಿಗಣಿಸಿ ಆರೋಪಿತರಿಗೆ ಜೀವಾವಧಿ ಶಿಕ್ಷೆ ಹಾಗೂ 3.24 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರ್ವ ಮಂಗಳ ಆರ್. ಗಡಕರಿ ವಾದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು