6:35 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ ವಶ

01/05/2026, 17:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರೈತರು ಯೂರಿಯಾ ಗೊಬ್ಬರ ಸಿಗದೆ ಪರದಾಡುತ್ತಿದ್ದು,
ಮಧ್ಯವರ್ತಿಗಳು ಕೋಳಿ ಫಾರಂನಲ್ಲಿ ನೂರಾರು ಮೂಟೆ ಸ್ಟಾಕ್ ಇಟ್ಟಿದ್ದಾರೆ. ಈ ನಡುವೆ ಕೃಷಿ ಬಳಕೆಯ ರಸಗೊಬ್ಬರವನ್ನ ಅಕ್ರಮವಾಗಿ ಸ್ಟಾಕ್ ಮಾಡಿದವರಿಗೆ ಶಾಕ್ ನೀಡಲಾಗಿದೆ.
ಚಿಕ್ಕಮಗಳೂರಿನಲ್ಲಿ ಅಕ್ರಮ ಯೂರಿಯಾ ಗೊಬ್ಬರ ದಾಸ್ತಾನು ಪತ್ತೆಯಾಗಿದೆ.
ತಾಲೂಕಿನ ಕೆಸವಿನಮನೆ ಗ್ರಾಮದಲ್ಲಿ ಕೋಳಿ ಫಾರ್ಮ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಳಿ ಫಾರಂ ಮಾಲೀಕ ರಾಜೇಶ್ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಕೃಷಿ ಇಲಾಖೆ ಅಧಿಕಾರಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಕೈಗಾರಿಕಾ ಉದ್ದೇಶಕ್ಕೆ ಯೂರಿಯಾ ರೀಪ್ಯಾಕಿಂಗ್ ಆರೋಪ ಕೇಳಿ ಬರುತ್ತಿದೆ.
181 ಚೀಲ ಯೂರಿಯಾ,218 ರೀಪ್ಯಾಕ್ ಮಾಡಿದ ಯೂರಿಯಾ ಚೀಲಗಳು ವಶಪಡಿಸಿಕೊಳ್ಳಲಾಗಿದೆ.
ಒಟ್ಟು 399 ಯೂರಿಯಾ ಚೀಲಗಳನ್ನ ಕೃಷಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ.ಬಆರೋಪಿಗಳ ವಿರುದ್ಧ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು