3:32 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಉಡುಪಿಯ ತೊಟ್ಟಂ ವಿಶ್ರಾಮ್ ಹೋಮ್ ಸ್ಟೇ ಮೇಲೆ ದಾಳಿ: ಎಂಡಿಎಂಎ, ಗಾಂಜಾ ವಶ; ಹೋಮ್ ಸ್ಟೇ ಮಾಲೀಕ ಸಹಿತ 7 ಮಂದಿಯ ಬಂಧನ

19/06/2026, 21:09

ಉಡುಪಿ(reporterkarnataka.com): ಉಡುಪಿ ತಾಲೂಕಿನ ತೆಂಕನಿಡಿಯೂರು ಗ್ರಾಮದ ತೊಟ್ಟಂ ಚರ್ಚ್ ಸಮೀಪದ ವಿಶ್ರಾಮ್ ಹೋಮ್ ಸ್ಟೇ ಮೇಲೆ ಮಲ್ಪೆ ಪೊಲೀಸರು ದಾಳಿ ನಡೆಸಿ ಎಂಡಿಎಂಎ, ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಏಳು ಮಂದಿಯನ್ನು ಬಂಧಿಸಿದ್ದಾರೆ.
ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಂಗ್ರಹಿಸಿ ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಉಪಾಧೀಕ್ಷಕರು (ಉಡುಪಿ ಉಪವಿಭಾಗ) ಹಾಗೂ ಮಲ್ಪೆ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ., ಪಿಎಸ್‌ಐ ಗಂಗಪ್ಪ ಎಸ್. ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು.
ದಾಳಿಯ ವೇಳೆ ಹೋಂ ಸ್ಟೇಯ ಒಂದು ಕೊಠಡಿಯಲ್ಲಿ ನಾಜೀಲ್, ಮೊಹಮ್ಮದ್ ಅಜರುದ್ದೀನ್, ಮೊಹಮ್ಮದ್ ಅಫ್ನಾನ್ ಹಾಗೂ ವಿಘ್ನೇಶ್ ಎಂಬ ನಾಲ್ವರನ್ನು ಪರಿಶೀಲಿಸಿದಾಗ ಅವರು ಮಾದಕ ವಸ್ತು ಸೇವಿಸಿರುವುದು ಪತ್ತೆಯಾಯಿತು. ಬಳಿಕ ಪಂಚರ ಸಮಕ್ಷಮ ನಡೆಸಿದ ಶೋಧನೆಯಲ್ಲಿ 33.81 ಗ್ರಾಂ ಗಾಂಜಾ, 9.73 ಗ್ರಾಂ ಎಂಡಿಎಂಎ, ಐದು ಮೊಬೈಲ್ ಫೋನ್‌ಗಳು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಗಾಂಜಾದ ಮೌಲ್ಯ ಸುಮಾರು ₹3,000 ಹಾಗೂ ಎಂಡಿಎಂಎಯ ಮೌಲ್ಯ ₹20,000 ಎಂದು ಅಂದಾಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ಪೊಲೀಸ್ ಇಲಾಖೆಯಿಂದ ಅನಧಿಕೃತವಾಗಿ ಹೋಂ ಸ್ಟೇ ನಡೆಸದಂತೆ ನೋಟಿಸ್ ನೀಡಲಾಗಿದ್ದರೂ ನಿಯಮ ಉಲ್ಲಂಘಿಸಿ ಹೋಂ ಸ್ಟೇ ನಡೆಸುತ್ತಿದ್ದ ಮಾಲೀಕ ಧನ್ವತ್ ರಿಕ್ವಿತ್ ಹಾಗೂ ಕೆಲಸಗಾರ ಬಸವರಾಜ್ ಅವರು ಮಾದಕ ವಸ್ತುಗಳ ಸೇವನೆಗೆ ಸಹಕಾರ ನೀಡಿರುವ ಆರೋಪದಡಿ ಬಂಧಿತರಾಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಜಿನಾ ಅವರನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು