ಇತ್ತೀಚಿನ ಸುದ್ದಿ
ರೈಲು ದುರಂತ ಗಾಯಾಳುಗಳ ಪ್ರಧಾನಿ ಮೋದಿ ಭೇಟಿ: ಯೋಗಕ್ಷೇಮ ವಿಚಾರಣೆ; ಮಡಿದವರಿಗೆ 10 ಲಕ್ಷ ಪರಿಹಾರ
04/06/2023, 11:14
ಭುವನೇಶ್ವರ(reporterkarnataka.com): ಒಡಿಶಾದಲ್ಲಿ ಸಂಭವಿಸಿ ಭೀಕರ ರೈಲ್ವೆ ದುರಂತದಲ್ಲಿ ಗಾಯಗೊಂಡವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.
ಪ್ರಧಾನಿ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ ಶಿಕ್ಷಣ ಮತ್ತು ಕೌಶಲ್ಯ ವಿಕಾಸ ಅಭಿವೃದ್ಧಿ ಇಲಾಖೆ ಸಚಿವ ಧರ್ಮೇಂದ್ರ ಪ್ರಧಾನ್ , ವೈದ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.