1:22 AM Thursday28 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ರೈಲ್ವೆ ನಿಲ್ದಾಣದಲ್ಲಿ 16 ಕೋಟಿ ಮೌಲ್ಯದ GST ದಾಖಲೆಯಿಲ್ಲದ 32 ಕೆ.ಜಿ ಚಿನ್ನ ವಶ: ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಾಟ

03/03/2022, 13:53

ಭುವನೇಶ್ವರ(reporterkarnataka.com): ಕೋನಾರ್ಕ್ ಎಕ್ಸ್ ಪ್ರೆಸ್‍ನಲ್ಲಿ ಸಾಗಿಸುತ್ತಿದ್ದ ಸುಮಾರು 16 ಕೋಟಿ ಮೌಲ್ಯದ 32 ಕೆ.ಜಿ ಚಿನ್ನವನ್ನು ಗವರ್ನ್‍ಮೆಂಟ್ ರೈಲ್ವೇ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈಯಿಂದ ಮಂಗಳವಾರ ರಾತ್ರಿ 11.30ರ ಸುಮಾರಿಗೆ ಭುವನೇಶ್ವರಕ್ಕೆ ಆಗಮಿಸಿದ ರೈಲಿನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದ್ದು, ಬುಧವಾರ ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಜೊತೆಗೆ ನಾಲ್ವರನ್ನು ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಧಿಕಾರಿಗಳ ವಶವಾದ ನಾಲ್ವರನ್ನು ಹಸ್ಮುಖಲಾಲ್ ದೀಕ್ಷಿತ್, ಮಹೇಶ್ ಭೋಮ್ಸರ್, ಸುರೇಶ್ ಸಹದೇವ್ ಖರೆ ಮತ್ತು ದೀಪಕ್ ಪಟೇಲ್ ಎಂದು ಗುರುತಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ(GST) ದಾಖಲೆಗಳನ್ನು ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಆರ್ ಪಿ  ಸ್ಪಷ್ಟಪಡಿಸಿದೆ.ನಾಲ್ವರು ವ್ಯಕ್ತಿಗಳು ಮುಂಬೈಯಿಂದ ನಾಲ್ಕು ಬ್ಯಾಗ್ ಗಳ ಜೊತೆ ಬಂದಿದ್ದರು. ಒಂದೊಂದು ಬ್ಯಾಗ್ ನಲ್ಲಿ ಸುಮಾರು 8 ಕೆ.ಜಿಯಷ್ಟು ಬಂಗಾರ ತುಂಬಿದ್ದರು. ಭುವನೇಶ್ವರದಲ್ಲಿ ಚಿನ್ನದ ವ್ಯಾಪಾರಿಗಳಿಗೆ ಮಾರಾಟ ಮಾಡುವುದು ಅವರ ಪ್ಲ್ಯಾನ್ ಆಗಿತ್ತು. ಈ ವೇಳೆ ನಾಲ್ವರು ವ್ಯಕ್ತಿಗಳ ಮೇಲೆ ಅನುಮಾನ ಬಂದು ಪರಿಶೀಲನೆ ನಡೆಸಿದಾಗ ಚಿನ್ನ ಸಾಗಾಟ ಮಾಡುತ್ತಿರುವುದು ಬಯಲಾಗಿದೆ ಎಂದು ಭುವನೇಶ್ವರದ ಜಿಆರ್ ಪಿ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.ಈ ಆಭರಣಗಳಿಗೆ ಅವರು ತೆರಿಗೆ ಪಾವತಿಸುತ್ತಿರಲಿಲ್ಲ. ಹೀಗಾಗಿ ಈ ಚಿನ್ನವನ್ನು ಯಾರಿಗೆ ನೀಡುತ್ತಿದ್ದೇವೆ ಎಂಬುದನ್ನು ಸರಿಯಾಗಿ ಬಾಯಿಬಿಟ್ಟಿಲ್ಲ. ಒಟ್ಟಿನಲ್ಲಿ ಈ ಸಂಬಂಧ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇತ್ತ 32 ಕೆ.ಜಿ ಚಿನ್ನವನ್ನು ಜಿಆರ್‍ಪಿ ಅಧಿಕಾರಿಗಳು ಕೈಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು