ಇತ್ತೀಚಿನ ಸುದ್ದಿ
ರಾಜ್ಯಕ್ಕೆ ಈಶಾನ್ಯ ಮಾರುತ ಪ್ರವೇಶ: ಮತ್ತೆ ಮಳೆ ನಿರೀಕ್ಷೆ; ಎಲ್ಲೆಲ್ಲಿ ಆಗಲಿದೆ ವರ್ಷಾಧಾರೆ?
27/10/2021, 18:32
ಬೆಂಗಳೂರು (Reporterkarnataka.com)
ರಾಜ್ಯಕ್ಕೆ ಈಶಾನ್ಯ ಮಾರುತಗಳು ಪ್ರವೇಶವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲಾಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಹಿಂಗಾರು ಮಳೆ ಆರಂಭ ವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಗ್ರಾಮಾಂತರ, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲಾಗಳಲ್ಲಿ ಅತ್ಯಕ ಮಳೆ ಸಾಧ್ಯತೆ ಇದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲಾಗಳಲ್ಲಿ ಗುಡುಗು, ಮಿಂಚು ಸಹಿತ ಹೆಚ್ಚು ಮಳೆ ಸುರಿಯುವ ಎಚ್ಚರಿಕೆ ನೀಡಲಾಗಿದೆ. ಈ ಜಿಲ್ಲೆಯ ಕೆಲವು ಭಾಗದಲ್ಲಿ ಹೆಚ್ಚು ಮಳೆ ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.