9:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರೈತರ ಸಾಲ ಮನ್ನಾ, ಬೀಜ, ರಸಗೊಬ್ಬರ ಉಚಿತ ವಿತರಣೆ: ರಾಜ್ಯ ಸರಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಠೋಡ ಆಗ್ರಹ

04/06/2021, 12:19

ಭೀಮಣ್ಣ ಪೂಜಾರ್ ವಿಜಯಪುರ

info.reporterkarnataka@mail.com

ಕೊರೊನಾದಿಂದ ಅನ್ನದಾತರು ತೀವ್ರ ಸಂಕಷ್ಟದಲ್ಲಿದ್ದು, ಸರಕಾರ ತಕ್ಷಣ ರೈತರಿಗೆ ಉಚಿತ ಬೀಜ ಮತ್ತು ರಸಗೊಬ್ಬರ ಒದಗಿಸಬೇಕು. ರೈತರ ಸಾಲಮನ್ನಾ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಪ್ರಕಾಶ್ ರಾಠೋಡ ಒತ್ತಾಯಿಸಿದರು.

ವಿಜಯಪುರದ ಆಲಮಟ್ಟಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ರಾಜ್ಯ ಸರಕಾರ ಕೊರೊನಾದ ಹಿನ್ನೆಲೆಯಲ್ಲಿ ರೈತರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಿಲ್ಲ. ರೈತರ ಸಾಲ ಕೂಡ ಮನ್ನಾ ಮಾಡಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಹಸಿರು ಶಾಲು ಹಾಕಿಕೊಂಡು ರೈತರಿಗೆ ದ್ರೋಹ ಮಾಡಿದ್ದಾರೆ. ಎರಡು ವರ್ಷ ಮುಖ್ಯಮಂತ್ರಿಯಾದರೂ ರೈತರಿಗೆ ಒಂದು ಪೈಸೆ ಪ್ಯಾಕೇಜ್ ಕೊಡುವಲ್ಲಿ ವಿಫಲರಾಗಿದ್ದಾರೆ ಎಂದು ಅವರು ದೂರಿದರು.

ಯಡಿಯೂರಪ್ಪ ಸರಕಾರಕ್ಕೆ ಕಣ್ಣು ಕಾಣುತ್ತಿಲ್ಲ. ಕಿವಿ ಕೇಳಿಸುತ್ತಿಲ್ಲ. ರಾಜಕೀಯದಲ್ಲಿ ಅಷ್ಟೇ ಅಲ್ಲದೆ, ಅಭಿವೃದ್ಧಿಯಲ್ಲೂ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ರಾಠೋಡ್ ಆರೋಪಿಸಿದರು.

ವಿಜಯಪುರ ಜಿಲ್ಲೆಯ ಎಲ್ಲ ಕಡೆಗಳಲ್ಲಿ ಪ್ರವಾಸೋದ್ಯಮಕ್ಕೆ ಅವಕಾಶ ಮಾಡಿಕೊಡಬೇಕು. ಆಲಮಟ್ಟಿಯಲ್ಲಿ ಮೈಸೂರಿನ ಕೆಎಸ್ ಆರ್ ಮಾದರಿ ಉದ್ಯಾವನ ನಿರ್ಮಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ವಿಮಾನ ನಿಲ್ದಾಣ ಮಾಡುವುದಾಗಿ ಹೇಳಿದ್ದಾರೆ. ಆದರೆ ಮಾತನಾಡುವುದನ್ನು ಬಿಟ್ಟರೆ ಬೇರೆ ಯಾವುದೇ ಕೆಲಸ ಮಾಡಿಲ್ಲ. ನೂತನ ತಾಲೂಕು ರಚನೆಯಾಗಿ ತಿಂಗಳುಗಳು ಕಳೆದರೂ ರಾಜ್ಯ ಸರಕಾರ ನೂತನ ಕೇಂದ್ರಗಳಲ್ಲಿ ಮೂಲಸೌಕರ್ಯ ಒದಗಿಸಿಲ್ಲ. ಹೊಸ ತಾಲೂಕಿಗೆ ಬೇಕಾಗಿರುವ ಎಲ್ಲ ಕ್ರಮಗಳನ್ನು ತಕ್ಷಣ ತೆಗೆದು ಕೊಳ್ಳಬೇಕೆಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು