8:57 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ರೈತರು ಅಡವಿಟ್ಟಿದ್ದ ಚಿನ್ನಾಭರಣ ಫೈನಾನ್ಸ್‌ ಗೆ ಮಾರಿ ರಿಯಲ್ ಎಸ್ಟೇಟ್ ದಂಧೆ: ಬ್ಯಾಂಕ್‌ ಮ್ಯಾನೇಜರ್‌ ಬಂಧನ

28/03/2022, 10:05

ರಾಮನಗರ(reporterkarnataka.com): ಸಹಕಾರ ಬ್ಯಾಂಕ್ ವೊಂದರಲ್ಲಿ ರೈತರು ಅಡವಿಟ್ಟಿದ್ದ ಚಿನ್ನವನ್ನು ಬ್ಯಾಂಕ್ ನ ವ್ಯವಸ್ಥಾಪಕ ಖಾಸಗಿ ಫೈನಾನ್ಸ್ ಕಂಪನಿಗೆ ಮಾರಾಟ ಮಾಡಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳವಾಡಿಯ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಬ್ಯಾಂಕ್ ನಲ್ಲಿ ರೈತರು ಅಡವಿಟ್ಟಿದ್ದ ಸುಮಾರು 8 ಕೆಜಿಯ ಚಿನ್ನಾಭರಣವನ್ನು ಬ್ಯಾಂಕ್ ನ ವ್ಯವಸ್ಥಾಪಕ ಗೋವಿಂದಪ್ಪ ಎನ್ನುವವರು ಫೈನಾನ್ಸ್‌ ಗೆ ಮಾರಾಟ ಮಾಡಿದ್ದಾರೆ.

ರೈತರು ತಾನು ಅಡವಿಟ್ಟಿದ್ದ ಚಿನ್ನವನ್ನು ಬಿಡಿಸಿಕೊಳ್ಳಲು ಬಂದಾಗ ಅವರಿಗೆ ಒಡವೆ ನೀಡದೆ ಮ್ಯಾನೇಜರ್‌ ಸತಾಯಿಸುತ್ತಿದ್ದ. ಈ ಬಗ್ಗೆ ಮೇಲಧಿಕಾರಿಗಳಿಗೆ ರೈತ ದೂರು ಸಲ್ಲಿಸಿದ್ದರು.

ರೈತನ ದೂರಿನ ಆಧಾರದ ಮೇಲೆ ಗೋವಿಂದಪ್ಪನನ್ನು ವಿಚಾರಿಸಿದಾಗ ಬಸ್ ನಲ್ಲಿ ಹೋಗುವಾಗ ಚಿನ್ನಾಭರಣ ಕಳತನವಾಯಿತು ಎಂದು ಸುಳ್ಳು ಹೇಳಿದ.‌ ಅನುಮಾನಗೊಂಡು ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಂದಿದೆ.

ಪ್ರಕರಣ ಸಂಬಂಧ ಗೋವಿಂದಪ್ಪನನ್ನು ಬಂಧಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ ಎಷ್ಟು ಮೊತ್ತದ ಚಿನ್ನಾಭರಣ ಮಾರಾಟ ಮಾಡಿದ್ದಾನೆ ಎಂಬುದು ಆಡಿಟ್ ನಂತರವೇ ಹೊರಬೀಳಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು