10:41 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜಧಾನಿಯಲ್ಲಿ ದಿನದ 24 ತಾಸು ಹೊಟೇಲ್ ತೆರೆದಿಡಲು ಅವಕಾಶ ಕೊಡಿ: ಸರಕಾರಕ್ಕೆ ಆಗ್ರಹ

23/06/2023, 13:48

ಬೆಂಗಳೂರು(reporterkarnataka.com): ಸಾರ್ವಜನಿಕರ ಅನುಕೂಲಕ್ಕಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ದಿನದ 24 ತಾಸು ಹೊಟೇಲ್ ವ್ಯವಹಾರ ನಡೆಸುವುದು ಸೇರಿದಂತೆ ಕೆಲವು ಬೇಡಿಕೆ ಈಡೇರಿಸುವಂತೆ ಬೃಹತ್ ಬೆಂಗಳೂರು ಹೊಟೇಲ್ ಸಂಘ ಸರಕಾರವನ್ನು ಒತ್ತಾಯಿಸಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಂದು ಭೇಟಿಯಾದ ಬೃಹತ್ ಬೆಂಗಳೂರು ಹೊಟೇಲ್ ಸಂಘದ ಅಧ್ಯಕ್ಷ ಪಿ.ಸಿ.ರಾವ್ ನೇತೃತ್ವದ ನಿಯೋಗವು ಮನವಿಯನ್ನು ಸಲ್ಲಿಸಿದೆ.
ಹೊಟೇಲ್ ಸಂಘದ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಯವರು ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಹೊಟೇಲ್ ವಲಯವನ್ನು ಕೈಗಾರಿಕೆ ಎಂದು ಮಾನ್ಯ ಮಾಡಬೇಕು, ಉದ್ಯಮಕ್ಕೆ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿ ಮಾಡಬೇಕು ಎಂಬ ಬೇಡಿಕೆ ಈಡೇರಿಸುವುದರೊಂದಿಗೆ ಹೊಸ ಸರಕಾರವು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕೆಂದು ಒತ್ತಾಯಿಸಲಾಗಿದೆ.
ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ವಿರೇಂದ್ರ ಕಾಮತ್, ಸಂತೋಷ್ ಪೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು