8:18 PM Thursday13 - February 2025
ಬ್ರೇಕಿಂಗ್ ನ್ಯೂಸ್
A Walk up the Hill | ಪ್ರೊ. ಮಾಧವ ಗಾಡ್ಗೀಳ್ ಅವರ… PSI Suspension | ಚಿಕ್ಕಮಗಳೂರು: ಕರ್ತವ್ಯಲೋಪ; ಶೃಂಗೇರಿ ಪಿಎಸ್ ಐ ಜಕ್ಕಣ್ಣನವರ್ ಅಮಾನತು ಮಂಗಳೂರು: ನೇಶನಲ್ ಈಜು ಚಾಂಪಿಯನ್ 35 ವರ್ಷಗಳಿಂದಲೂ ಸ್ವಿ‌ಮ್ಮಿಂಗ್ ಪೂಲ್ ಲೈಫ್ ಗಾರ್ಡ್! ಮೈಸೂರಿನಲ್ಲಿ ಗಲಭೆಕೋರರಿಗೆ ಇಡೀ ಸರಕಾರ ಬೆಂಬಲ ನೀಡಿದೆ: ಪ್ರತಿಪಕ್ಷದ ನಾಯಕ ಆರ್. ಆಶೋಕ್ ಕ್ವಿನ್ ಸಿಟಿ ಆಗಲಿದೆ ಹೆಲ್ತ್ ಸಿಟಿ: ಜಾಗತಿಕ ಹೂಡಿಕೆದಾರರ ಚರ್ಚಾಗೋಷ್ಠಿಯಲ್ಲಿ ಸಚಿವ ಶರಣ್… Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ… ಕಾಂಗ್ರೆಸ್‌ ಸರಕಾರ ಪ್ರಕರಣ ವಾಪಸ್‌ ಪಡೆಯುವುದರಿಂದ ಮತಾಂಧರಿಗೆ ಹಲ್ಲೆ ಮಾಡುವ ಧೈರ್ಯ ಬಂದಿದೆ:… ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್,… ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುವ ಮುನ್ನ ಎಚ್ಚರ ಇರಲಿ: ಹೆಣ್ಮಕ್ಕಳಿಗೆ ಎಸಿಪಿ… ಪರಶುರಾಂಪುರ ತಾಲೂಕು ಮಾಡುವುದು ನನ್ನ ಸಂಕಲ್ಪ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ

ಇತ್ತೀಚಿನ ಸುದ್ದಿ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲೀಸ್ ಠಾಣೆ ಮೇಲೆ ದಾಳಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪ

11/02/2025, 19:28

ನವದೆಹಲಿ(reporterkarnataka.com): ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ, ಕೇರಳ ತಮಿಳುನಾಡಿನಲ್ಲಿ ಒಂದು ವರ್ಗ ಮತ್ತು ಸಂಘಟನೆ ನಮ್ಮ ಇಡೀ ದೇಶ ಹಾಗೂ ವ್ಯವಸ್ಥೆಯನ್ನೇ ಚಾಲೆಂಜ್ ಮಾಡುವ ರೀತಿ ಕಾರ್ಯ ಚಟುವಟಿಕೆ ಮಾಡುತ್ತಿವೆ. ಪಿಎಫ್ ಐ ನಿಷೇಧ ಆಗಿದೆ. ಆದರೂ ಕೂಡ ಆ ಸಂಸ್ಥೆಯ ಕಾರ್ಯಕರ್ತರು ಬೇರೆ ಬೇರೆ ಹೆಸರಿನಲ್ಲಿ ಕಾರ್ಯಚಟುವಟಿಕೆ ಮಾಡುತ್ತಿದ್ದಾರೆ ಎಂದರು.
ಕೆಜಿ ಹಳ್ಳಿ, ಡಿಜೆ ಹಳ್ಳಿ, ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳಿಗೂ ಮೈಸೂರಿನಲ್ಲಿ ನಡೆದ ಘಟನೆಗೂ ಸಾಮ್ಯತೆ ಇದೆ. ನಮ್ಮ ಸರ್ಕಾರ ಇದ್ದಾಗ ಕಠಿಣ ಕ್ರಮ ಕೈಗೊಂಡು ಹಲವಾರು ಜನರನ್ನು ಜೈಲಿಗೆ ಹಾಕಿದ್ದೇವು. ಈ ಸರ್ಕಾರ ಬಂದ ಮೇಲೆ ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ಭಾಗಿಯಾದವರ ಮೇಲಿನ ಎಲ್ಲ ಪ್ರಕರಣಗಳನ್ನು ವಾಪಸ್ ಪಡೆದು ಅವರೆಲ್ಲರೂ ಅಮಾಯಕರು ಎಂದು ಹೇಳಿದರು. ಅವರು ಮಾಡಿದ ಘಟನೆಯ ವಿಡಿಯೊ ಸಿಸಿ ಟಿವಿಯಲ್ಲಿ ಸಿಕ್ಕರೂ ಅವರನ್ನು ಅಮಾಯಕರು ಎಂದರು. ಅದರಿಂದ ಪ್ರೇರಣೆಗೊಂಡು ಈಗ ಮತ್ತೆ ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ದಾಳಿ, ಪೊಲಿಸ್ ವಾಹನದ ಮೇಲೆ ದಾಳಿ ಮಾಡಿದ್ದಾರೆ. ಇದರಿಂದ ಪೊಲೀಸ್ ಇನ್ಸ್ ಪೆಕ್ಟರ್ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ, ಡಿಸಿಪಿ ಕಾರ್ ಮೇಲೂ ದಾಳಿ ಮಾಡುವಷ್ಟು ಧೈರ್ಯ ಬಂದಿದೆ. ಈ ಧೈರ್ಯ ಎಲ್ಲಿಂದ ಬಂತು. ಸರ್ಕಾರ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ, ರಾಜಕಾರಣಿಗಳ ಕುಮ್ಮಕ್ಕಿನಿಂದ ಈ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ ಎಂದು ಆರೋಪಿಸಿದರು.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಆಗಿದೆ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು. ಅವರು ಯಾವಾಗಲೂ ಸಂವಿಧಾನ, ರೂಲ್ ಆಫ್ ಲಾ ಅಂತ ಹೇಳುತ್ತಾರೆ. ಇವತ್ತು ರೂಲ್ ಆಫ್ ಲಾ ಪ್ರಕಾರ ಕ್ರಮ ಕೈಗೊಳ್ಳುತ್ತಾರಾ ? ಅಥವಾ ತುಷ್ಡೀಕರಣಕ್ಕಾಗಿ ಸುಮ್ಮನಾಗುತ್ತಾರೊ ಎನ್ನುವುದನ್ನು ಜನರು ನೋಡುತ್ತಾರೆ. ಇವರು ಸಂವಿಧಾನ ಬದ್ದವಾಗಿ ಆಡಳಿತ ಮಾಡುತ್ತಾರೊ ಅಥವಾ ರಾಜಕಾರಣಕ್ಕಾಗಿ ಆಡಳಿತ ಮಾಡುತ್ತಾರೊ ಎನ್ನುವನ್ನುದನ್ನು ನೋಡಿ ಜನರು ಮುಂದಿನ ತೀರ್ಮಾನ ಮಾಡುತ್ತಾರೆ‌. ಘಟನೆಯ ವಿಡಿಯೊವನ್ನು ಇಡಿ ಜಗತ್ತೇ ನೋಡಿದರು ಕಾಂಗ್ರೆಸ್ ನವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆಂದರೆ ಅವರು ಎಷ್ಟು ಭಂಡತನಕ್ಕೆ ಬಿದ್ದಿದ್ದಾರೆ ನೋಡಿ ಎಂದರು.

*ಹೈಕಮಾಂಡ್ ತೀರ್ಮಾನ ಅಂತಿಮ:*
ರಾಜ್ಯದ ಬಿಜೆಪಿ ಗೊಂದಲ ಬಗೆ ಹರಿಸಲು ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ನಾವು ಅದಕ್ಕೆ ಬದ್ದ ರಾಗಿದ್ದೇವೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಏನು ನೊಟಿಸ್ ಬಂದಿದೆ. ಅದಕ್ಕೆ ಅವರು ಏನು ಉತ್ತರ ಕೊಟ್ಟಿದ್ದಾರೆ ಎನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ, ಅಂತಿಮವಾಗಿ ಹೈಕಮಾಂಡ್ ಪ್ರವೇಶ ಮಾಡಿರುವುದರಿಂದ ಇದು ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಮುಗಿಯುತ್ತದೆ ಎನ್ನುವ ವಿಶ್ವಾಸ ನನಗಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು