6:35 PM Wednesday15 - January 2025
ಬ್ರೇಕಿಂಗ್ ನ್ಯೂಸ್
5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ ನಂಜನಗೂಡು: ಅಂಧಕಾಸುರ ಸಂಹಾರ ಧಾರ್ಮಿಕ ಆಚರಣೆ ನಿರ್ವಿಘ್ನವಾಗಿ ಮುಕ್ತಾಯ ಹಸುಗಳ ಕೆಚ್ಚಲು ಕೊಯ್ದ ದುರುಳರ ವಿರುದ್ಧ ಕಠಿಣ ಕ್ರಮ ಜರುಗಿಸಿ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ರಾಜಕೀಯ ಒಣ ಪ್ರತಿಷ್ಠೆಗೆ ಬಲಿಯಾಗುತ್ತಿರುವ ಅಧಿವೇಶನ: ದಿನಕ್ಕೆ 1.5 -2 ಕೋಟಿ ರೂ. ನಷ್ಟಕ್ಕೆ ಹೊಣೆ ಯಾರು?; ಮಾಜಿ ಸಿಎಂ ಎಚ್‍ಡಿಕೆ ಆಕ್ರೋಶ 

18/02/2022, 15:53

ಬೆಂಗಳೂರು(reporterkarnataka.com,): ರಾಜಕೀಯಕೋಸ್ಕರ ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ‘ರಾಜಕೀಯ ಪ್ರತಿಷ್ಠೆ’ಗೆ ಆಹುತಿಯಾಗಿದೆ. ಯಾವ ಪುರುಷಾರ್ಥಕ್ಕೆ ಈ ಅಧಿವೇಶನ ನಡೆಯುತ್ತಿದೆ. ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಹೊಣೆ ಯಾರು ಎಂದು ಸರಣಿ ಟ್ವೀಟ್ ಮೂಲಕ 

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ

ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ಮುಂದುವರಿದಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ ಎಂದು ಕಿಡಿಕಾರಿದರು.

‘ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.” ಎಂದು ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ್ದರು.

ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ಎನ್ನುವಂತಾಗಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

10 ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ..? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ 1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ‘ಕಾಲ ಕಸ’ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?. ಕೋವಿಡ್’ನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ..?

ಕಲಾಪಕ್ಕೆ ‘ಜನಪರ ಅಜೆಂಡಾ’ ಇರಬೇಕೆ ವಿನಾ ‘ಚುನಾವಣೆ ಅಜೆಂಡಾ’ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ‘ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣ’ಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. ಜನರು ಕಷ್ಟದಲ್ಲಿದ್ದಾರೆ. ಕೋವಿಡ್’ನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು. ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.

ಇತ್ತೀಚಿನ ಸುದ್ದಿ

ಜಾಹೀರಾತು