8:09 PM Tuesday28 - January 2025
ಬ್ರೇಕಿಂಗ್ ನ್ಯೂಸ್
ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಹೆಚ್ಚಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಖೇದ ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಾಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ: ಮುಖ್ಯಮಂತ್ರಿಗಳ ತವರು ಕ್ಷೇತ್ರದಲ್ಲಿ ಮತ್ತೊಂದು ಜೀವಬಲಿ; ಭಾರೀ… ಕೋಟೆಕಾರು ದರೋಡೆ ಪ್ರಕರಣ; ಒಟ್ಟು 18.314 ಕೆಜಿ ಚಿನ್ನಾಭರಣ, 3.80 ಲಕ್ಷ ರೂ.… ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ಸರಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನರು, ಸರ್ಕಾರ ಮಾಡಿದ… ಚಿಕ್ಕಮಗಳೂರು : ಕಾಫಿ‌‌ ಪಲ್ಪರ್ ನೀರಿನಿಂದ ಆನೆ ಹಳ್ಳದ ನೀರು ಕಲುಷಿತ; ಗ್ರಾಮಸ್ಥರ… ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬದುಕು ಸ್ಫೂರ್ತಿದಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ಉಳಿಯಲು ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ: ಮಾಜಿ ಸಿಎಂ… ಕಲ್ಲು ಗಣಿಗಾರಿಕೆ: ಡೈನಮೈಟ್ ಸ್ಫೋಟಕ್ಕೆ ಹಲವು ಮನೆಗಳಿಗೆ ಹಾನಿ; 6 ಸೆಕೆಂಡ್ ಕಂಪಿಸಿದ…

ಇತ್ತೀಚಿನ ಸುದ್ದಿ

ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿಗೆ ಇಡಿ ನೋಟೀಸ್: ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ

27/01/2025, 16:15

ಬೆಂಗಳೂರು(reporterkarnataka.com): ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.
ಸಿಎಂ ಪತ್ನಿ, ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, “ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು. ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.
ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಸಂಸ್ಥೆಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದರು.
*ಸರ್ಕಾರ ಸುಭದ್ರವಾಗಿದೆ:*
ಸಿಎಂ ಹುದ್ದೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ,ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು