10:27 AM Monday7 - April 2025
ಬ್ರೇಕಿಂಗ್ ನ್ಯೂಸ್
Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್… FKCCI Udyog Mela | ಉದ್ಯೋಗ ನೀಡುವ ಜತೆಗೆ ಉತ್ತಮ ಸಂಬಳ ನೀಡಿ:… Bangalore | ಮೋಸ ಹೋಗಬೇಡಿ; ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ: ಸಚಿವೆ ಲಕ್ಷ್ಮೀ… Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌…

ಇತ್ತೀಚಿನ ಸುದ್ದಿ

ರಾಜಕೀಯ ಉದ್ದೇಶದಿಂದ ಕೆರೆಗಳಿಗೆ ನೀರು ಹರಿಸುತ್ತಿಲ್ಲ, ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ: ರಮೇಶ್ ಕುಮಾರ್

08/07/2021, 09:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ರೈತರು ಕೆಸಿ ವ್ಯಾಲಿ ನೀರಿನ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ತಾಲೂಕಿನ ಕಲ್ಲೂರು ಗ್ರಾಮದ ಕೆರೆಗೆ ಕೆಸಿ ವ್ಯಾಲಿ ನೀರು ಹರಿಸುವ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ , ಈ ಕೆರೆ ೨೭೨ ಎಕರೆ ವಿಸ್ತೀರ್ಣ ಹೊಂದಿದೆ. ಆಲವಟ್ಟ ಕೆರೆಯಿಂದ ನೀರು ಹರಿಸಲಾಗುವುದು , ಕೆರೆ ತುಂಬಿದಾಗ ಸುತ್ತಮುತ್ತಲಿನ ಗ್ರಾಮಗಳ ಚಿತ್ರಣ ಬದಲಾಗಲಿದೆ . ಅಂತರ್ಜಲ ವೃದ್ಧಿಗೊಳ್ಳುವುದರಿಂದ ಕೃಷಿ ಚಟುವಟಿಕೆ ಮರು ಜೀವ ಪಡೆದುಕೊಳ್ಳುತ್ತದೆ ಎಂದು ಹೇಳಿದರು . 

ರಾಜಕೀಯ ಉದ್ದೇಶದಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿಲ್ಲ. ನೀರಿನಲ್ಲಿ ರಾಜಕೀಯ ಮಾಡಬೇಕಾದ ಅಗತ್ಯವೂ ಇಲ್ಲ .ನಾನೂ ಸಹ ಕೃಷಿಕನಾಗಿದ್ದು , ಕೃಷಿ ಉದ್ದೇಶಕ್ಕೆ ೧೮ ಕೊಳವೆ ಬಾವಿ ನಿರ್ಮಿಸಿ ನೀರಿನಿಂದ ವಂಚಿತನಾಗಿದ್ದೇನೆ . ಇಲ್ಲಿನ ಇದೇ ಪರಿಸ್ಥಿತಿಯಾಗಿದೆ ಎಂದು ಹೇಳಿದರು . 

ತಹಶೀಲ್ದಾರ್ ಎಸ್.ಎಂ. ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ,  ಹಿರಿಯ ಸಹಾಯಕ ಕೃಷಿ ನಿರ್ದೇಶಕ ಎಂ. ಶ್ರೀನಿವಾಸ್ , ಪೊಲೀಸ್ ಇನ್ಸ್ ಪೆಕರ್ ಸಿ.ರವಿ ಕುಮಾರ್ , ಮುಖಂಡರಾದ ಕೆ.ಮಂಜುನಾಥರೆಡ್ಡಿ , ಮುನಿವೆಂಕಟಪ್ಪ , ರಾಮಕೃಷ್ಣಾರೆಡ್ಡಿ , ವೆಂಕಟರೆಡ್ಡಿ , ವೇಣುಗೋಪಾಲ್ , ಹರೀಶ್ ಯಾದವ್ ,  ರೈತರದ್ದು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು