ಇತ್ತೀಚಿನ ಸುದ್ದಿ
ರಾಜಸ್ತಾನ: ಸೆಲ್ಫಿ ತೆಗೆಯುವಾಗ ಸಿಡಿಲು ಬಡಿದು 11 ಮಂದಿ ದಾರುಣ ಸಾವು; 5 ಲಕ್ಷ ರೂ. ಪರಿಹಾರ ಘೋಷಣೆ
12/07/2021, 12:05

ಜೈಪುರ: ರಾಜಸ್ತಾನದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮಳೆಯಲ್ಲೇ ಸೆಲ್ಫಿ ತೆಗೆಯಲು ಹೋದ 11 ಮಂದಿ ಸಿಡಿಲಿನಾಘಾತಕ್ಕೆ ಮೃತಪಟ್ಟಿದ್ದಾರೆ.
ಜೈಪುರದಲ್ಲಿ ಈ ದುರ್ಘಟನೆ ನಡೆದಿದೆ. ಸಿಡಿಲು ಬರುತ್ತಿರುವಾಗ ಸೆಲ್ಫಿ ಕ್ಲಿಕ್ಕಿಸಿದ್ದು ಜೀವಕ್ಕೆ ಕುತ್ತು ತಂದಿದೆ.
ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂ.ಪರಿಹಾರವನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ.