7:24 PM Wednesday15 - January 2025
ಬ್ರೇಕಿಂಗ್ ನ್ಯೂಸ್
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಬಿಜೆಪಿ… ಕೆಚ್ಚಲು ಕೊಯ್ದ ಪ್ರಕರಣ: ದನದ ಮಾಲೀಕನ ತಾಯಿಗೆ 3 ಹಸು ಕೊಡಿಸಿದ ಸಚಿವ… 5 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ: ಆರೋಪಿಯ ತಕ್ಷಣ ಬಂಧಿಸಲು ಆಗ್ರಹಿಸಿ ಎಐಎಂಎಸ್ಎಸ್… ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ… ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಹಬ್ಬ ಆಚರಿಸಿಕೊಂಡ ಕೇಂದ್ರ ಸಚಿವ ಕುಮಾರಸ್ವಾಮಿ ಶಬರಿಮಲೆ: ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ಭಕ್ತರಿಗೆ ಮಕರ ಜ್ಯೋತಿ ದರ್ಶನ: ಪುನೀತರಾದ… ನಂಜನಗೂಡು: ಶಿವಶರಣ ಶ್ರೀ ಸಿದ್ದರಾಮೇಶ್ವರ ರ ಜಯಂತಿ ಆಚರಣೆ ಜಿಹಾದಿ ಮನಸ್ಥಿತಿಯನ್ನು ಪೋಷಿಸಿ ಬೆಳೆಸುತ್ತಿರುವ ಸಿದ್ದರಾಮಯ್ಯ ಸರಕಾರ: ಸಂಸದ ಕ್ಯಾ ಬ್ರಿಜೇಶ್ ಚೌಟ… ವಿಜಯಪುರ: 4 ಮಂದಿ ಮಕ್ಕಳ ಜತೆ ಕಾಲುವೆಗೆ ಜಿಗಿದ ಹೆತ್ತಬ್ಬೆ: ಮಕ್ಕಳ ದಾರುಣ… ಹಸುಗಳ ಕೆಚ್ಚಲು ಕೊಯ್ದ ‘ವ್ಯಾಘ್ರ’ನ ಬಂಧನ: ಬಿಹಾರ ಮೂಲದ ದುಷ್ಟನಿಗೆ ನ್ಯಾಯಾಂಗ ಬಂಧನ

ಇತ್ತೀಚಿನ ಸುದ್ದಿ

ರಾಜ್ಯದ ಎಲ್ಲ ಸರಕಾರಿ ಶಾಲೆಗಳಿಗೆ ಉಚಿತ ನೀರು, ವಿದ್ಯುತ್: ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನಡ ರಾಜ್ಯೋತ್ಸವ ಕೊಡುಗೆ ಘೋಷಣೆ

01/11/2023, 12:41

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ರಾಜ್ಯದ ಎಲ್ಲ ಸರಕಾರಿ ಶಾಲೆಗಳಿಗೆ ಇಂದಿನಿಂದ ಉಚಿತ ನೀರು ಮತ್ತು ವಿದ್ಯುತ್ ಸಿಗಲಿದೆ. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕೊಡುಗೆಯನ್ನು
ಘೋಷಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ ಎಂದರು.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಕರೆ ನೀಡಿದರು.
ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.
ಕೇಂದ್ರ ಸರಕಾರ ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ಮುಖ್ಯಮಂತ್ರಿ ನುಡಿದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ ಎಂದರು.
ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆಧ್ಯತೆ ಎಂದು ಅವರು ನುಡಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಶಾಸಕ ರಿಜ್ಷಾನ್ ಹರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು