6:53 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ರಾಜ್ಯ ವಿಧಾನಸಭೆ ಚುನಾವಣೆ: 16,976 ಶತಾಯುಷಿ ಮತದಾರರು; 9,17,241 ಟೀನೇಜ್ ಓಟರ್ಸ್

30/03/2023, 19:42

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ 5,21,73,579 ಮಂದಿ ಮತದಾರರಿದ್ದಾರೆ. ಇವರಲ್ಲಿ 2,62,42,561 ಮಂದಿ ಪುರುಷ ಹಾಗೂ 2,59,26,319 ಮಹಿಳಾ ಮತದಾರರಿದ್ದಾರೆ.
80 ವರ್ಷ ಮೇಲ್ಪಟ್ಟವರು 12,15,763 ಜನ ಇದ್ದಾರೆ. 100 ವರ್ಷ ಮೇಲ್ಪಟ್ಟ 16,976 ಮತದಾರರಿದ್ದಾರೆ. 9,17,241 ಮಂದಿ ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ. 4,699 ತೃತೀಯ ಲಿಂಗಿ ಮತದಾರರಿದ್ದಾರೆ. 17 ವರ್ಷ ಮೇಲ್ಪಟ್ಟವರು 1,25,406 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳು ಇರಲಿವೆ. ಒಂದು ಮತಗಟ್ಟೆಯಲ್ಲಿ 883 ಜನ ಮತ ಹಾಕಬಹುದಾಗಿದೆ. ನಗರ ಪ್ರದೇಶಗಳಲ್ಲಿ 24,063 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 34,219 ಮತಗಟ್ಟೆಗಳು ಇರಲಿವೆ. ಹಾಗೇ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಲಾಗುವುದು. ಅಂಗವಿಕಲರಿಗೆ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಸುವಿಧಾ ಮೂಲಕ ನಾಮಪತ್ರ ಸಲ್ಲಿಸಬಹುದು.
ಅಫಿಡವಿಟ್ ಕೂಡ ಸಲ್ಲಿಕೆ ಮಾಡಬಹುದು. ಅಪರಾಧ ಪ್ರಕರಣಗಳು ಇದ್ದರೆ ಮೂರು ಬೇರೆ ಬೇರೆ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರಬೇಕು. ಆನ್​​ಲೈನ್​​ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪೇಪರ್ ಕಟ್ಟಿಂಗ್ ಕೂಡ ಅಪ್​ಲೋಡ್ ಮಾಡಬೇಕು. ಸಭೆ, ಸಮಾರಂಭ ಮಾಡುವುದಕ್ಕೂ ಆನ್​​ಲೈನ್ ಮೂಲಕವೇ ಮನವಿ ಸಲ್ಲಿಸಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು