1:08 PM Tuesday14 - October 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್…

ಇತ್ತೀಚಿನ ಸುದ್ದಿ

ರಾಜ್ಯ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ

17/03/2024, 22:01

ಮಂಗಳೂರು(reporterkarnataka.com): ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆಯಾಗಿದ್ದಾರೆ.
1991ರಿಂದ ವಿದ್ಯಾರ್ಥಿ ಕಾಂಗ್ರೆಸ್ (ಎನ್ ಎಸ್ ಯುಐ)ನಲ್ಲಿ ಗುರುತಿಸಿಕೊಂಡು ಯು. ಟಿ. ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾವೂರಿನಲ್ಲಿ ಪರಿಚಯ ಕಲಾ ರಂಗ ಸಂಘವನ್ನು ಕಟ್ಟಿಕೊಂಡು ಮೊಸರು ಕುಡಿಕೆ ಉತ್ಸವವನ್ನು ಪ್ರಾರಂಭಿಸಿದರು. ಕಾವೂರು ವ್ಯವಸಾಯ ಸಹಕಾರಿ ಬ್ಯಾಂಕ್ ನಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕರ್ನಾಟಕ ಸರಕಾರ ಆಹಾರ ಆಯೋಗ ದಲ್ಲಿ ಸದಸ್ಯರಾಗಿ ಆಯ್ಕೆಯಾಗುದರೊಂದಿಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಜಿಲ್ಲೆಯಿಂದ ಮೊದಲ ಬಾರಿಗೆ ಕ್ಷತ್ರಿಯ ಸಮಾಜಕ್ಕೆ ಅವಕಾಶ ಸಿಕ್ಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು