7:19 AM Sunday21 - September 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಇತ್ತೀಚಿನ ಸುದ್ದಿ

ರಾಜ್ಯ ಬಂದ್ ಕರೆಗೆ ಶ್ರೀನಿವಾಸಪುರದಲ್ಲಿ ಬೆಂಬಲ: ಮುಸ್ಲಿಮರ ಅಂಗಡಿ- ಮುಂಗಟ್ಟು, ಶಿಕ್ಷಣ ಸಂಸ್ಥೆಗಳು ಬಂದ್

17/03/2022, 18:10

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಹಿಜಾಬ್ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಕರ್ನಾಟಕ ಅಮೀರ್ ಎ ಶರೀಯತ್‌ನ ಮೌಲಾನಾ ಸಗೀರ್ ಅಹ್ಮದ್ ಕರೆ ನೀಡಿರುವ ರಾಜ್ಯ ಬಂದ್‌ಗೆ ಶ್ರೀನಿವಾಸಪುರದಲ್ಲಿ ಗುರುವಾರ ಬೆಂಬಲ ವ್ಯಕ್ತವಾಗಿದೆ.


ಮುಸ್ಲಿಮರಿಗೆ ಸೇರಿದ ಬಹುತೇಕ ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ತೆರೆಯಲಿಲ್ಲ . ಕೆಲವು ಶಿಕ್ಷಣ ಸಂಸ್ಥೆಗಳು , ಮದ್ರಸಗಳಿಗೆ ರಜೆ ಸಾರಲಾಗಿದೆ. ಆಜಾದ್ ರಸ್ತೆ, ರಾಜಾಜಿ ರಸ್ತೆ, ಟಿಪ್ಪು ಸರ್ಕಲ್, ತರಕಾರಿ ಮಾರುಕಟ್ಟೆ, ಮಟನ್ ಮಾರ್ಕೆಟ್, ವ್ಯವಹಾರ ಚಟುವಟಿಕೆಗಳು ಸ್ಥಗಿತಗೊಂಡಿವೆ . 

ಮುಸ್ಲಿಂ ಮಾಲಕತ್ವದ ಕಚೇರಿಗಳು , ಅಂಗಡಿಗಳು , ಮಳಿಗೆಗಳು , ಹೊಟೇಲ್ ಗಳು ವರ್ಕ್ ಶಾಪ್‌ಗಳು , ಅಂಚೆ ಕಛೇರಿ ರಸ್ತೆಯ ಫುಟ್ ವೀರ್ ಅಂಗಡಿಗಳು, ಗುತ್ತಿಗೆ ಸಂಸ್ಥೆಗಳು ಕೂಡ ಮುಚ್ಚಲ್ಪಟ್ಟಿವೆ .

ಮುಸ್ಲಿಂ ಸಂಘಟನೆಗಳೂ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .

ಇತ್ತೀಚಿನ ಸುದ್ದಿ

ಜಾಹೀರಾತು