ಇತ್ತೀಚಿನ ಸುದ್ದಿ
ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ – ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ
17/11/2023, 18:55
ಬೆಂಗಳೂರು(reporterkarnataka.com): ರಾಜ್ಯ ಬಿಜೆಪಿ ನೂತನ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬೆಂಗಳೂರಿನ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವುದು ಎನ್ನುವುದು ಗಮನಾರ್ಹ ಅಂಶವಾಗಿದೆ. ಭೇಟಿ ವೇಳೆ ವಿಜಯೇಂದ್ರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪ ಕುರಿತು ಹಣಕಾಸು ಸಚಿವರ ಜತೆ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಶಂತ್ ಕುಮಾರ್ ಗೌತಮ್ ಉಪಸ್ಥಿತರಿದ್ದರು.