12:49 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಮತ್ತೆ ಮೇಲುಗೈ: ವಿಜಯೇಂದ್ರ ರಾಜ್ಯ ಕಮಲ ಪಾಳಯದ ನೂತನ ಸಾರಥಿ

10/11/2023, 20:15

ಹೊಸದಿಲ್ಲಿ(reporterkarnataka.com): ಕಗ್ಗಂಟಾಗಿರುವ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕೊನೆಗೂ ಸುಖಾಂತ್ಯ ಕಂಡಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು
ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಿಜಯೇಂದ್ರ ಅವರ ನೇಮಕದ ಆದೇಶ ಹೊರಡಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಈ ಆಯ್ಕೆ ನಡೆಸಿದೆ.
ಬಿ.ವೈ. ವಿಜಯೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. ಪಕ್ಷದ ಕಾರ್ಯದಿಂದ ಯಡಿಯೂರಪ್ಪ ಅವರನ್ನು ಹೊರಗಿಟ್ಟ ಕಾರಣ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಮತ್ತೆ ಪ್ರವರ್ಧಮಾನಕ್ಕೆ ತರುವ ನಿಟ್ಟಿನಲ್ಲಿ ಅವರ ಪುತ್ರನ ಆಯ್ಕೆ ಮಾಡಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ. ಪುತ್ರ ರಾಜ್ಯಾಧ್ಯಕ್ಷರಾಗಿರುವುದರಿಂದ ಯಡಿಯೂರಪ್ಪ ಅವರು ಮತ್ತೆ ಸಕ್ರೀಯರಾಗಿ ಪಕ್ಷದ ಗೆಲುವಿಗೆ ಶ್ರಮಿಸುವರು ಎಂಬ ಲೆಕ್ಕಾಚಾರವನ್ನು ಬಿಜೆಪಿ ಹೈಕಮಾಂಡ್ ಮಾಡಿದೆ. ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರನ್ನು ಮೂಲೆಗೆ ತಳ್ಳುವ ನಿಟ್ಟಿನಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನ ಅಷ್ಟೇನು ಪ್ರಾಮುಖ್ಯತೆ ಇಲ್ಲದ ಉಪಾಧ್ಯಕ್ಷ ಸ್ಥಾನವನ್ನು ವಿಜಯೇಂದ್ರ ಅವರಿಗೆ ನೀಡಲಾಗಿತ್ತು.
ಇದೀಗ ವಿಜಯೇಂದ್ರ ಅವರ ಆಯ್ಕೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಮಾಹಿತಿ ನೀಡಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶದ ಮೇರೆಗೆ ಶಾಸಕ ವಿಜಯೇಂದ್ರ ಯಡಿಯೂರಪ್ಪ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು