8:22 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಸಿಎಂ ಬದಲಾವಣೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದೇನು?

11/08/2022, 10:53

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬರುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಧ್ಯಪ್ರವೇಶಿಸಿದ್ದಾರೆ. ಹಾಗಾದರೆ ಈ ಕುರಿತು ಬಿಎಸ್ ವೈ ಹೇಳಿದ್ದೇನು?

ಮಂತ್ರಾಲಯಕ್ಕೂ ತೆರಳುವ ಮುನ್ನ ಮಾಧ್ಯಮ ಜತೆ ಮಾತನಾಡಿದ ಅವರು, ಬೊಮ್ಮಾಯಿ ಅವರೇ ಸಿಎಂ ಆಗಿ
ಮುಂದುವರಿಯುತ್ತಾರೆ. ಚುನಾವಣೆಗೆ 7-8 ತಿಂಗಳು ಇರುವಾಗ ಬದಲಾವಣೆ ಪ್ರಶ್ನೆ ಬರುವುದಿಲ್ಲ. ಮುಖ್ಯಮಂತ್ರಿ ಗಳಾಗಿ ಬೊಮ್ಮಾಯಿ ಅವ್ರೇ ಮುಂದುವರಿಯುತ್ತಾರೆ ಎಂದರು.

ರಾಜ್ಯದಲ್ಲಿ ಮೂರನೇ ಸಿಎಂ ಬರ್ತಾರೆಂದು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಸಂಬಂಧ ಮಾತನಾಡಿದ ಅವರು ಸಿಎಂ ಬದಲಾವಣೆ ಕುರಿತ ಚರ್ಚೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ. 

ಅನಗತ್ಯವಾದ ಚರ್ಚೆ ಸರಿಯಲ್ಲ. ಯಾರೂ ಕೂಡ ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯೂ ಇಲ್ಲ. ಕೇಂದ್ರ ಗೃಹ ಸಚಿವ 
ಅಮಿತ್ ಷಾ ನನ್ನ ಬಳಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಮಾಡಿದ್ರು ಅಷ್ಟೇ. ಆದರೆ ನಾಯಕತ್ವದ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಯಾರು ಏನೇ ಹೇಳಿದ್ರು ಆ ರೀತಿಯ ಬದಲಾವಣೆಗಿಳಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳುವುದೇ ನಮ್ಮ ಉದ್ದೇಶ. ನಾನು ಈಗಾಗಲೇ ವಿಧಾನಸಭೆ ಯಲ್ಲಿ ಹೇಳಿದ್ದೇನೆ, ಯಾರೋ ಒಂದಿಬ್ಬರು ತಾವು ಮುಂದೆ ಮುಖ್ಯಮಂತ್ರಿ ಆಗ್ತೀವಿ ಅನ್ನೋ ಭ್ರಮೆ ನಲ್ಲಿದ್ದಾರೆ. ಆದರೆ ಅವರಿಗೆ ನಾವು ಅವಕಾಶ ಮಾಡಿಕೊಡುವುದಿಲ್ಲ. ನಿಶ್ಚಿತವಾಗಿ ಬಿಜೆಪಿಯವರೇ ಮುಂದಿನ ಮುಖ್ಯಮಂತ್ರಿಗಳಾಗ್ತಾರೆ. ನಾವೆಲ್ಲರೂ ಸಾಮೂಹಿಕವಾಗಿ ಪ್ರವಾಸ ಮಾಡಿ, ಅಧಿಕಾರಕ್ಕೆ ಬರಲು 135 ಸ್ಥಾನ ಗೆಲ್ತೇವೆ. ನಮಗೆ ಮೋದಿಯಂತ ನಾಯಕ ಇರೋದ್ರಿಂದ ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ವಿಶ್ವಾಸ ನಮಗೆ ಇದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು