4:18 PM Friday15 - November 2024
ಬ್ರೇಕಿಂಗ್ ನ್ಯೂಸ್
ಆರಗ ಜ್ಞಾನೇಂದ್ರ ಶಾಸಕ ಸ್ಥಾನವನ್ನು ಗಿರವಿ ಇಟ್ಟಿದ್ದಾರಾ?; ಅವರನ್ನು ಆಯ್ಕೆ ಮಾಡಿದ್ದೆ ನಮ್ಮ… ಚಿಕ್ಕಮಗಳೂರು: ನಕ್ಸಲ್ ಚಟುವಟಿಕೆ ಪ್ರಕರಣ; ಇಬ್ಬರು ಶಂಕಿತ ನಕ್ಸಲರು ಸೇರಿ 4 ಮಂದಿ… ಬೆಂಗಳೂರು ಸೈಂಟ್ ಜೋಸೆಫ್ ವಿವಿಯ ಫ್ಯಾಕಲ್ಟಿ ಡೆವಲಪ್ ಮೆಂಟ್ ಪ್ರೋಗ್ರಾಂ: ಹೆಲ್ತ್ ಕೇರ್… ಶ್ರೀನಿವಾಸಪುರ ತಾಲೂಕು ವಕೀಲರಿಂದ ಅನಿರ್ದಿಷ್ಟ ಪ್ರತಿಭಟನೆ: ನ್ಯಾಯಾಲಯ ಕಲಾಪಕ್ಕೆ ಬಹಿಷ್ಕಾರ ಪವಿತ್ರ ಯಾತ್ರಾ ಸ್ಥಳ ಸುತ್ತೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ರಂಗಸ್ವಾಮಿ ಅವಿರೋಧ… ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ-2024: ಸಿಎಂ ಸಿದ್ದರಾಮಯ್ಯ ಲಾಂಛನ ಅನಾವರಣ ಮೂಡಿಗೆರೆ: ಮದುವೆ ಸಮಾರಂಭದಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನ ಎಗರಿಸಿದ ಖದೀಮರು ಸಂಡೂರು ವಿಧಾನಸಭೆ ಉಪ ಚುನಾವಣೆ: ಶೇ.76.24ರಷ್ಟು ಮತದಾನ ಕಾಫಿನಾಡಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ?: ನಕ್ಸಲ್ ನಿಗ್ರಹ ಪಡೆಯಿಂದ ಕೂಂಬಿಂಗ್ ಆರಂಭ ಗಣಿ ಮಾಫಿಯಾ, ಹಣದ ಶಕ್ತಿ, ಸುಳ್ಳು ಪ್ರಚಾರದಿಂದ ರಕ್ಷಿಸಲು ಮತ ಚಲಾಯಿಸಿ: ಗೋಪಿನಾಥ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು