ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಣೆ:ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿದೆ
03/06/2021, 18:45

ಬೆಂಗಳೂರು(reporterkarmataka news): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗುತ್ತಿದ್ದರೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುಕಡಿಮೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಜೂನ್ 14ರ ತನಕ ಲಾಕ್ ಡೌನ್ ಜಾರಿಯಲ್ಲಿರುತ್ತದೆ.
ಮೊದಲ ಹಂತದ ಲಾಕ್ ಡೌನ್ ಮೇ 24ಕ್ಕೆ ಅಂತ್ಯಗೊಂಡಿತ್ತು. ಬಳಿಕ ಎರಡನೇ ಹಂತದ ಲಾಕ್ ಡೌನ್ ಜೂನ್ 7ರ ವರೆಗೆ ವಿಧಿಸಲಾಯಿತು. ಇದೀಗ ಜೂನ್ 14ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ. ರಫ್ತು ಉದ್ಯಮ ಸೇರಿದಂತೆ ಕೆಲವು ಕ್ಷೇತ್ರಗಳಿಗೆ ಸಡಿಲಿಕೆ ನೀಡಲಾಗಿದೆ.