10:47 AM Saturday21 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮಹಿಳೆಯ ಮೇಲೆ 1400ಕ್ಕೂ ಹೆಚ್ಚು ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು: ರಾಜ್ಯ ಮಹಿಳಾ ಆಯೋಗ ಕಳವಳ

01/03/2023, 18:20

ಮಂಗಳೂರು(reporter Karnataka.com): ರಾಜ್ಯ ಮಹಿಳಾ ಆಯೋಗವು ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ದೂರು ದಾಖಲಾದ ಕೆಲವೇ ದಿನದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಪ್ರಮೀಳಾ ಆರ್. ನಾಯ್ಡು ಹೇಳಿದರು.

ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್ ನ ವಿಡಿಯೋ ಸಂವಾದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಇತರೆ ಪ್ರಕರಣಗಳಲ್ಲಿ ಮಹಿಳೆಯರನ್ನು ರಕ್ಷಿಸಲು ಸಶಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದು, ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾಖಲಾದ ದೂರುಗಳನ್ನು ಕೂಡಲೇ ಇತ್ಯರ್ಥ ಪಡಿಸಲು ಹಾಗೂ ನೊಂದ ಮಹಿಳೆಯರಿಗೆ ನ್ಯಾಯಕೊಡಿಸುವ ಕೆಲಸ ಮಾಡುತ್ತಿದೆ ಕೆಲವೊಂದು ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕೊಂಡು ಪರಿಹಾರ ಕಲ್ಪಿಸಲಾಗುತ್ತಿದೆ ಎಂದರು.
2020ರಿಂದ ಮಹಿಳಾ ಆಯೋಗವು ರಾಜ್ಯದಲ್ಲಿ 6,728 ದೂರುಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 4,120ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ವಿವಿಧ ಹಂತಗಳಲ್ಲಿ 2,608 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿವೆ. ಈ ದೂರುಗಳ ಪೈಕಿ 1,400ಕ್ಕೂ ಹೆಚ್ಚು ಪ್ರಕರಣಗಳು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ್ದರೆ, 1,905 ಪ್ರಕರಣಗಳು ರಕ್ಷಣೆ ಕೋರಿ, 347 ವರದಕ್ಷಿಣೆ ಕಿರುಕುಳ, 26 ವರದಕ್ಷಿಣೆ ಸಾವು/ಕೊಲೆ, 37 ಲೈಂಗಿಕ ದೌರ್ಜನ್ಯ, 208 ಪೊಲೀಸ್ ದೌರ್ಜನ್ಯ ಪ್ರಕರಣಗಳಾಗಿವೆ ಎಂದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 280 ಪ್ರಕರಣಗಳನ್ನು ಸ್ವೀಕರಿಸಲಾಗಿದ್ದು, ಇದುವರೆಗೆ 151 ಪ್ರಕರಣಗಳನ್ನು ಪರಿಹರಿಸಲಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟಲು ಆಂತರಿಕ ದೂರು ಸಮಿತಿ ರಚಿಸುವಂತೆ 2,500 ಕಂಪೆನಿಗಳಿಗೆ ಪತ್ರ ಬರೆದಿದ್ದು, ಇದುವರೆಗೆ 1,100 ಕಂಪೆನಿಗಳಿಂದ ಉತ್ತರ ಸ್ವೀಕರಿಸಲಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸಿಡಿಪಿಒ ಕಚೇರಿಗಳಲ್ಲಿ ಒಟ್ಟು 722 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 520 ಪ್ರಕರಣಗಳನ್ನು ಸಂಧಾನದ ಮೂಲಕ ಪರಿಹರಿಸಲಾಗಿದ್ದರೆ, 170 ಪ್ರಕರಣಗಳು ನ್ಯಾಯಾಲಯದಲ್ಲಿವೆ ಎಂದವರು ಹೇಳಿದರು.
ಆಯೋಗವು ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಕೌನ್ಸಿಲಿಂಗ್ ಮೂಲಕ ಕುಟುಂಬ ಪುನರ್ಮಿಲನ ಒತ್ತು ನೀಡುತ್ತಿದೆ, ಅಲ್ಲದೆ, ಹದಿಹರೆಯದವರಲ್ಲಿ ಪ್ರೇಮ ಪ್ರಕರಣಗಳು, ಲಿವ್ ಇನ್ ರಿಲೇಶನ್‌ಶಿಪ್ ಮತ್ತು ಸೈಬರ್ ಅಪರಾಧಗಳ ಕುರಿತು ಶಾಲೆ- ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಮಹಿಳೆಯರ ಸ್ಥಿತಿಗತಿ ಕುರಿತು ನೆನ್ನೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕೂಲಂಕುಶವಾಗಿ ಸಭೆ ನಡೆಸಲಾಗಿದೆ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹಾಗೂ ವಿವಾಹೇತರ ಸಂಬಂಧಗಳ ಬಗ್ಗೆ ಹೆಚ್ಚಿನ ಪ್ರಕರಣಗಳು ಜಿಲೆಯಲ್ಲಿ ಕಂಡುಬಂದಿವೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ. ಕುಮಾರ್ ಅವರು ಮಾತನಾಡಿದರು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪ ಭೋವಿ ಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು