6:21 AM Friday29 - August 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮತ್ತೆ `ಲಾಕ್ ಡೌನ್’ ಜಾರಿಯಾಗುತ್ತಾ?: ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದೇನು..?

11/01/2022, 14:58

ಬೆಂಗಳೂರು(reporterkarnataka.com) : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು. ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಲಿದೆ ಎಂದರು.

ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಅಗತ್ಯವಿದ್ದರೆ ಮುಂದಿನ ಕ್ರಮ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಯಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಹೇಳಿದ್ದಾರೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಒಂಥಾರ ಸೀಸನ್ ರಾಜಕಾರಣಿ, ಏನಾದ್ರೂ ಹೇಳಿದ್ರೆ ಅದಕ್ಕೊಂದು ಏನಾದ್ರೂ ಹೇಳುತ್ತಾರೆ. ಅನುಭವವನ್ನು ರಾಜಕೀಯಕ್ಕೆ ಬಳಸಬೇಕು. ಅದರ ಬದಲು ತನ್ನನ್ನು ರಕ್ಷಣೆ ಮಾಡಿಕೊಳ್ಳಲು ಬಳಸುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು