ಇತ್ತೀಚಿನ ಸುದ್ದಿ
ರಾಜ್ಯದಲ್ಲಿ ಪದವಿ ಕಾಲೇಜು ಆರಂಭದ ದಿನಾಂಕ ಇನ್ನೂ ನಿಗದಿಯಾಗಿಲ್ಲ, ಗೊಂದಲ ಬೇಡ: ಡಿಸಿಎಂ ಡಾ. ಅಶ್ವಥ್ ನಾರಾಯಣ
09/07/2021, 08:18
ಬೆಂಗಳೂರು(reporterkarnataka news): ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭ ದಿನಾಂಕದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ. ಈ ಬಗ್ಗೆ ಗೊಂದಲ ಬೇಡ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ.
ಎಲ್ಲ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ಒದಗಿಸುವುದು ನಮ್ಮ ಪ್ರಥಮ ಆದ್ಯತೆ. ಸರಕಾರಿ, ಅನುದಾನಿತ ಕಾಲೇಜುಗಳಲ್ಲಿ ಈಗಾಗಲೇ ಶೇ 65ರಷ್ಟು ಲಸಿಕೆ ನೀಡಲಾಗಿದೆ. ಖಾಸಗಿ ಕಾಲೇಜುಗಳಿಗೂ ಲಸಿಕೆ ನೀಡಲು ಸೂಚಿಸಲಾಗಿದೆ. ಎಲ್ಲರ ಸುರಕ್ಷತೆ ಕಾಪಾಡೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ.