1:00 PM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಾಳೆಯಿಂದ ಆಂಭ: 8. 73 ಲಕ್ಷ  ವಿದ್ಯಾರ್ಥಿಗಳು ಈ ಬಾರಿ ಬರೆಯಲಿದ್ದಾರೆ ಎಕ್ಸಾಂ;

27/03/2022, 17:14

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ `ಎಸ್‌ಎಸ್‌ಎಲ್ ಸಿ’ ಪರೀಕ್ಷೆ ನಡೆಯಲಿದೆ. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ ಎಸ್  ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ.

3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ.

ರಾಜ್ಯದಲ್ಲಿ ಒಟ್ಟು 8,73,846 ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆ ಬರೆಯಲಿದ್ದು, ಈ ಪೈಕಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ.

ಶಾಲಾ ಸಮವಸ್ತ್ರ ಧರಿಸಿ ಎಕ್ಸಾಂ ಬರಿರಿ: 

ದಿನಾಂಕ 28-03-2022 ರಿಂದ ದಿನಾಂಕ 11-04-2022ರವರೆಗೆ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಶಿಕ್ಷಣ ಇಲಾಖೆ ಖಡಕ್ ಆದೇಶದಲ್ಲಿ ತಿಳಿಸಿದೆ.

ಈ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯು ದಿನಾಂಕ 28-03-2022ರಿಂದ ದಿನಾಂಕ 11-04-2022ರವರೆಗೆ ನಡೆಸಲು ಈಗಾಗಲೇ ತೀರ್ಮಾನಿಸಲಾಗಿದೆ. ಈಗಾಗಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ಆದೇಶ ಹೊರಡಿಸಲಾಗಿದೆ ಎಂದು ತಿಳಿಸಿದೆ.

ಪೋಷಕರಿಗೆ ಎಸ್ ಎಂ ಎಸ್  ಹಾಗು ವಾಟ್ಸಾಪ್ ಸಂದೇಶ: 

ಎಸ್ ಎಸ್‌ಎಲ್ ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಕೊಠಡಿಯ ಮಾಹಿತಿಯನ್ನು ಮುಂಚಿತವಾಗಿಇ ಎಸ್‌ಎಂಎಸ್ ಮೂಲಕ ತಿಳಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧರಿಸಿದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಗುಂಪುಗೂಡುವುದನ್ನು ತಡೆಯುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವ ಸಲುವಾಗಿ ಮುಂಚಿತವಾಗಿ ವಿದ್ಯಾರ್ಥಿಗಳ ಪಾಲಕರ ಮೊಬೈಲ್ ಫೋನ್ ಗಳಿಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಯಪ್ ಮೂಲಕ ಮಾಹಿತಿ ಕಳುಹಿಸಲಾಗುತ್ತದೆ.

ಪರೀಕ್ಷಾ ಕೇಂದ್ರ ದ ಸುತ್ತ ಬಿಗಿ ಬಂದೋ ಬಸ್ತ್ : 

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಪೋಲೀಸ್ ಬಿಗಿ ಬಂದೊಬಸ್ತ್ ಮಾಡಲಾಗಿದ್ದು ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ .

ಇತ್ತೀಚಿನ ಸುದ್ದಿ

ಜಾಹೀರಾತು