ಇತ್ತೀಚಿನ ಸುದ್ದಿ
ರಾಜ್ಯದ ಲಾಕ್ ಡೌನ್ ಭವಿಷ್ಯ ಜೂನ್ 6ರಂದು ನಿರ್ಧಾರ?:ಲಾಕ್ ಬೇಡ ಎನ್ನುತ್ತಿದೆ ಆರ್ಥಿಕ ಇಲಾಖೆ, ಬೇಕು ಎನ್ನುತ್ತಿದೆ ತಜ್ಞರ ಸಮಿತಿ
01/06/2021, 14:37
ಬೆಂಗಳೂರು(reporterkarnataka news): ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲಾಕ್ ಡೌನ್ ಮುಂದುವರಿಸುವಂತೆ ತಜ್ಞರ ಸಮಿತಿ ವರದಿ ನೀಡಿದೆ. ಈ ಮಧ್ಯೆ ರಾಜ್ಯದ ಹಣಕಾಸಿನ ದೃಷ್ಟಿಯಿಂದ ಲಾಕ್ ಡೌನ್ ತೆರವುಗೊಳಿಸುವಂತೆ ಆರ್ಥಿಕ ಇಲಾಖೆ ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಜೂನ್ 6ರಂದು ಲಾಕ್ ಡೌನ್ ಭವಿಷ್ಯ ನಿರ್ಧಾರವಾಗಲಿದೆ ಎಂದು ತಿಳಿದು ಬಂದಿದೆ.
ಸಾವು-ನೋವಿನ ಪ್ರಮಾಣ ಹೆಚ್ಚುತ್ತಲೇ ಇರುವ
ಕಾರಣ ಕೋವಿಡ್ ಪಾಸಿಟಿವಿಟಿ ರೇಟ್ ಶೇ. 5 ಕ್ಕಿಂತ ಕಡಿಮೆ ಹಾಗೂ ಸಾವಿನ ಪ್ರಮಾಣ ಶೇ. 1ಕ್ಕಿಂತ ಕಡಿಮೆಯಾಗುವರೆಗೂ ಲಾಕ್ ಡೌನ್ ಸೂಕ್ತ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಿದೆ.
ರಾಜ್ಯ ಸರ್ಕಾರ ವಿಧಿಸಿರುವ ಲಾಕ್ ಡೌನ್ ಜೂನ್ 7 ಕ್ಕೆ ಕೊನೆಯಾಗಲಿದೆ. ಈ ನಿಟ್ಟಿನಲ್ಲಿ ಭಾನುವಾರ ಸಭೆ ನಡೆಸಿದ ತಜ್ಞರ ಸಮಿತಿ ಸೋಮವಾರ ಸರ್ಕಾರಕ್ಕೆ ಹಲವು ಅಂಶಗಳನ್ನು ಒಳಗೊಂಡ ವರದಿ ನೀಡಿತ್ತು. ಹೀಗಾಗಿ ಲಾಕ್ ಡೌನ್ ಭವಿಷ್ಯ ಸದ್ಯ ಸಿಎಂ ಯಡಿಯೂರಪ್ಪ ಅಂಗಳದಲ್ಲಿದ್ದು, ಜೂನ್ 6 ರಂದು ಸಭೆ ನಡೆಸಿ ಸಿಎಂ ಅಂತಿಮ ತೀರ್ಮಾನ ಪ್ರಕಟಿಸಲಿದ್ದಾರೆ ಎನ್ನಲಾಗುತ್ತಿದೆ.