8:05 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟ: ಶೆಟಲ್ ಬ್ಯಾಡ್ಮಿಂಟನ್‌ ನಲ್ಲಿ ರಾಜೇಶ್ ಬಿ.ಆರ್. ಪ್ರಥಮ; ರಾಷ್ಟ್ರಮಟ್ಟಕ್ಕೆ ಆಯ್ಕೆ

06/11/2023, 11:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporter Karnataka@gmail.com

ಮೈಸೂರಿನ ಚಾಮುಂಡಿ ವಿಹಾರ ಸ್ಟೇಡಿಯಂನಲ್ಲಿ ನಡೆದ ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ನಡೆದ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ. ಆರ್. ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ತಾಂತ್ರಿಕ ಶಿಕ್ಷಣ ಇಲಾಖೆ ಮತ್ತು ಸಿಪಿಸಿ ಪಾಲಿಟೆಕ್ನಿಕ್ ಮೈಸೂರು, ಇವರ ವತಿಯಿಂದ ನಡೆದ ೪೪ನೇ ರಾಜ್ಯಮಟ್ಟದ ಅಂತರ ಪಾಲಿಟೆಕ್ನಿಕ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ. ಆರ್. ಮತ್ತು ಉಡುಪಿಯ ದರ್ಶನ್ ಸಿ. ಅಂಬಲಪಾಡಿ ಭಾಗವಹಿಸಿದ್ದು ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರ
ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳೊಂದಿಗೆ ಉಡುಪಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಉಮಾ ಬಿ. ಮತ್ತು ಕ್ರೀಡಾ ಯೋಜನಾಧಿಕಾರಿಳಾದ ಮಧು ಎಂಜಿ ಇದ್ದರು. ಮೂಡಿಗೆರೆ ತಾಲ್ಲೂಕಿನ ಭಾರತಿಬೈಲ್‌ನ ರಾಜೇಶ್ ಬಿ. ಆರ್., ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮೊ ವ್ಯಾಸಂಗ ಮಾಡುತ್ತಿದ್ದಾರೆ. ರಾಜೇಶ್ ಬಿ.ಆರ್. ಭಾರತಿಬೈಲ್‌ನ ರಾಮಚಂದ್ರ ಮತ್ತು ಸರೋಜ ದಂಪತಿ ಪುತ್ರ.
ಇದೇ ಕ್ರೀಡಾಕೂಟದಲ್ಲಿ ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಾದ ಸಾಕ್ಷಿತ್ ದೇವಾಡಿಗ ಕಾಪು , ಸುಚಿತ್ ಕುಂದಾಪುರ, ಕಾರ್ತಿಕ್ ಶೆಟ್ಟಿಗಾರ್, ಸಂದೀಪ್ ಎಚ್ ಎಂ, ಶ್ರೀ ಜಿ ಆಚಾರ್ಯ ಕುಂದಾಪುರ, ಸನಾತ್ ಆಚಾರ್ಯ ಕಾಪು, ವಿನಯ್ ಕುಮಾರ್, ಆದಿತ್ಯ ಉಡುಪಿ ವಾಲಿಬಾಲ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು