4:47 AM Sunday30 - November 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಾಜ್ಯಮಟ್ಟದ ಕೃಷಿ ಪಂಡಿತ ಪ್ರಶಸ್ತಿ: ಆರ್ಹರಾಗಿದ್ದರೆ ನೀವು ಕೂಡ ಅರ್ಜಿ ಸಲ್ಲಿಸಬಹುದು

09/06/2021, 07:30

ಮಂಗಳೂರು (reporterkarnataka news): ಕೃಷಿ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಹ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ರೈತರು ಅರ್ಜಿಗಳನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮಂಗಳೂರು ಇವರಿಗೆ ಸಲ್ಲಿಸಬಹದುದು.
ರಾಜ್ಯ ಕೃಷಿ ಕ್ಷೇತ್ರದಲ್ಲಿ ವಿನೂತನ  ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿ ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವವರಾಗಿರಬೇಕು. ಸಂಶೋಧನೆ/ಸಾಧನೆಗಳು ವ್ಯಾಪಕವಾಗಿ ಅಳವಡಿಸಲ್ಪಟ್ಟು ಕೃಷಿ ಕ್ಷೇತ್ರದ ಏಳಿಗೆಗೆ ಕಾರಣವಾಗಿರಬೇಕು ಹಾಗೂ ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುಚಟಿಕೆಗಳ ಜೆರಾಕ್ಸ್, ಫೋಟೋಗ್ರಾಫ್, ಸಿ.ಡಿ ಗಳನ್ನು ಲಗತ್ತಿಸಿರಬೇಕು.
ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ರೈತ ಸಂಪರ್ಕ ಕೇಂದ್ರಗಳು ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದೂ. ಸಂಖ್ಯೆ: 0824-2423601 ಅನ್ನು ಸಂಪರ್ಕಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು