10:23 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಲೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾರತಿ ಕುಲಕರ್ಣಿ ಆಯ್ಕೆ: ನಾಳೆ ಪುರಸ್ಕಾರ ಪ್ರದಾನ

05/03/2022, 10:36

ಕಾರವಾರ(reporterkarnataka.com):

ರಾಜ್ಯದಲ್ಲಿ ವಿವಿಧ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಕಲಾ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಭಾರತಿ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ಮಾರ್ಚ್ 6ರಂದು  ಭಾನುವಾರ ಬೆಂಗಳೂರಿನ ಬಾಗಲಗುಂಟೆಯ ಹೆಸರುಗಟ್ಟ ಮುಖ್ಯರಸ್ತೆಯಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಕರ್ನಾಟಕ ರಾಜ್ಯ ಜನಸ್ಪಂದನಾ ಟ್ರಸ್ಟ್ ನ 5ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಹಮ್ಮಿಕೊಂಡಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ರಾಜ್ಯ ಅಧ್ಯಕ್ಷ ಹನುಮಂತಪ್ಪ ಮೇಡೆಗಾರ ತಿಳಿಸಿದ್ದಾರೆ. 

ಹಿಂದೆ ನಡೆಸಿದ 25 ವಾರಗಳ ವಿವಿಧ ಆನ್ಲೈನ್ ಸ್ಪರ್ಧೆಗಳಲ್ಲಿ ಸ್ಪರ್ಧಿಸಿ ಪ್ರತಿ ಸ್ಪರ್ಧೆಯಲ್ಲೂ ಪ್ರಥಮ, ದ್ವಿತೀಯ ಅಥವಾ ತೃತೀಯ ಬಹುಮಾನ ಪಡೆದ ಕಲಾಕುಸುಮಗಳಿಗೆ ಸನ್ಮಾನಿಸಿ ಅಭಿನಂದಿಸಿ ಗೌರವಿಸಲಾಗುವುದು. “ನೂಲಿನಂತೆ ಸೀರೆ ತಾಯಿಯಂತೆ ಮಗಳು” ಎಂಬ ಮಾತಿನಂತೆ ತಾಯಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿ ಸಾಧನೆಗೈದ್ದರೆ ಮಗಳು ಅನುರಾಧ ಕುಲಕರ್ಣಿ (8 ವರ್ಷ) 25 ವಾರಗಳ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಪ್ರಥಮ ದ್ವಿತೀಯ ತೃತೀಯ ಬಹುಮಾನ ಪಡೆದು ಗೌರವಕ್ಕೆ ಪಾತ್ರಳಾಗಿದ್ದಾಳೆ. ಈ ತಾಯಿ ಮಗಳಸಾಧನೆ ಮತ್ತು ಕೀರ್ತಿ ರಾಜ್ಯ, ರಾಷ್ಟ್ರ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಲಿ ಇನ್ನಷ್ಟು ಹೆಚ್ಚೆಚ್ಚು ಸಾಧನೆ ಮಾಡುವಂತಾಗಲಿ ಎಂದು ಟ್ರಸ್ಟಿನ ಪದಾಧಿಕಾರಿಗಳು, ಮೂರೂರು ಪ್ರಗತಿ ವಿದ್ಯಾಲಯದ ಆಡಳಿತಮಂಡಳಿಯವರು, ಮುಖ್ಯಾಧ್ಯಾಪಕರು ಹಾಗೂ ಸಂಪೂರ್ಣ ಶಿಕ್ಷಕ ವೃಂದ (ಸಹೋದ್ಯೋಗಿಗಳು), ಮಿತ್ರವೃಂದದವರು ಮತ್ತು ಬಂಧು-ಬಳಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು