8:32 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ರಾಜ್ಯ ಮುಳುಗುತ್ತಿದ್ದರೆ ಸಿಎಂ ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿ: ಕೆಪಿಸಿಸಿ ವಕ್ತಾರ ಕೆಂಗಲ್‌ ಶ್ರೀಪಾದ್‌ ರೇಣು ಟೀಕೆ

23/11/2021, 15:22

ಬೆಂಗಳೂರು(reporterkarnataka.com): ಅಕಾಲಿಕ ಮಳೆಯಿಂದಾಗಿ ರಾಜ್ಯದ ಹಾಗೂ ಬೆಂಗಳೂರು ನಗರದ ಜನರು ಪರಿತಪಿಸುತ್ತಿದ್ದರೆ ಜನರು ಹಾಗೂ ರೈತರ ಬಗ್ಗೆ ಯಾವುದೇ ಕಾಳಜಿ ತೋರಿಸದೇ ಇರುವ ಮುಖ್ಯಮಂತ್ರಿಗಳು ಕಾಮನ್‌ ಅಲ್ಲ ಕಾಸ್ಟ್ಲಿ ಮ್ಯಾನ್‌ ಎಂದು ಕೆಪಿಸಿಸಿ ವಕ್ತಾರ ಕೆಂಗಲ್ ಶ್ರೀಪಾದ ರೇಣು ಟೀಕಿಸಿದ್ದಾರೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಕಳೆದೊಂದು ವಾರದಿಂದ ರಾಜ್ಯದಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ರಾಜ್ಯದ ರೈತರು ತೀವ್ರ ತೊಂದರೆಗೀಡಾಗಿದ್ದಾರೆ. ಬೆಂಗಳೂರು ನಗರದಲ್ಲೂ ಹಲವಾರು ಪ್ರದೇಶಗಳು ಜಲಾವೃತವಾಗಿವೆ. ಇತರೆ ಮುಖ್ಯಮಂತ್ರಿಗಳು ಇಂತಹ ಸಂಧರ್ಭದಲ್ಲಿ ಮಳೆಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿರುತ್ತಿದ್ದರು. ನವದೆಹಲಿಗೆ ತೆರಳುವ ಸಂಧರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ವಿಶೇಷ ವಿಮಾನ ವ್ಯವಸ್ಥೆ ಮಾಕೊಳ್ಳುವ ಸಿಎಂ, ಕನಿಷ್ಠ ಹೆಲಿಕ್ಯಾಪ್ಟರ್‌ ನಲ್ಲಾದರೂ ಸಮೀಕ್ಷೆ ಮಾಡಬಹುದಿತ್ತು. ರೈತರ ಸಹಾಯಕ್ಕೆ ಧಾವಿಸುವ ಬದಲಾಗಿ ನಮ್ಮ ಮುಖ್ಯಮಂತ್ರಿಗಳು ಬೆಂಗಳೂರು ನಗರದಲ್ಲಿ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕಾಲಹರಣ ಮಾಡುತ್ತಿದ್ದಾರೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನಗರದ ಉಸ್ತುವಾರಿಯೂ ಆಗಿರುವ ಮುಖ್ಯಮಂತ್ರಿಗಳು ಇದುವರೆಗೆ ಒಂದೇ ಒಂದು ಬಾರಿ ಮಳೆಯಿಂದ ತೊಂದರೆಗೀಡಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ಹೊಸಕೋಟೆ ಮತ್ತು ಚಿಕ್ಕಬಳ್ಳಾಪುರಕ್ಕೆ ಫ್ಲೈಯಿಂಗ್‌ ವಿಸಿಟ್‌ ಮಾಡಿದ್ದಾರೆ. ಇಂತಹ ಕಣ್ಣೊರೆಸುವ ತಂತ್ರಗಳನ್ನು ಬಿಟ್ಟು ಕಾಮನ್‌ ಮ್ಯಾನ್‌ ಗಿರುವ ಬದ್ದತೆಯನ್ನು ತೋರಿಸಬೇಕು ಎಂದು ಆಗ್ರಹಿಸಿದ್ದಾರೆ. 

ಜನಸಾಮಾನ್ಯರ ಮುಖ್ಯಮಂತ್ರಿ ನಾನು ಕಾಮನ್‌ ಮ್ಯಾನ್‌ ಎಂದು ತಮ್ಮ ಎದೆ ತಟ್ಟಿಕೊಂಡಿದ್ದ ಮುಖ್ಯಮಂತ್ರಿಗಳು ಬದ್ದತೆ ಕೇವಲ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದೋ ಎಂದು ಟೀಕಿಸಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು