5:50 PM Monday20 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ರಾಜ್ಯ ನೂತನ ಮುಖ್ಯಮಂತ್ರಿ: ಶಾಸಕಾಂಗ ಸಭೆ ಬೆನ್ನಲ್ಲೇ ಇಂದು ರಾತ್ರಿ ಘೋಷಣೆ? ಯಾರು ಹೊಸ ಸಿಎಂ? 

27/07/2021, 17:50

ಬೆಂಗಳೂರು(reporterkarnataka news) ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಇಂದು ರಾತ್ರಿ 7:30ಕ್ಕೆ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್‌ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದ್ದು, ಅಲ್ಲಿ ನೂತನ ಮುಖ್ಯಮಂತ್ರಿಯ ಘೋಷಿಸುವ ಸಾಧ್ಯತೆಗಳಿವೆ.

ವೀಕ್ಷಕರಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್ ಮತ್ತು ಕಿಶನ್ ರೆಡ್ಡಿ ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಲಿದ್ದು, ಎಲ್ಲಾ ಶಾಸಕರ ಅಭಿಪ್ರಾಯ ಪಡೆದ ಬಳಿಕ ನೂತನ ಸಿಎಂ ಹೆಸರನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಬಿಜೆಪಿ ಹೈಕಮಾಂಡ್ ಈಗಾಗಲೇ ಮುಖ್ಯಮಂತ್ರಿ ಯಾರಾಗಬೇಕೆನ್ನುವುದನ್ನು ನಿರ್ಧರಿಸಿದ್ದು, ಶಾಸ್ತ್ರಕಷ್ಟೇ ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ ನಲ್ಲಿ ಶಾಸಕಾಂಗ ಸಭೆ ನಡೆಸಲಾಗುತ್ತದೆ ಎನ್ನಲಾಗಿದೆ. ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಹೈಕಮಾಂಡ್ ಸಂಸ್ಕೃತಿಯ ಪಕ್ಷಗಳು ಮೊದಲಿನಿಂದಲೂ ಹೇರುವ ಕ್ರಮವನ್ನೇ ಮಾಡಿಕೊಂಡು ಬಂದಿವೆ. ಹಿಂದೆ ಕಾಂಗ್ರೆಸ್ ಆಡಳಿತದಲ್ಲಿದ್ದಾಗಲೂ ದೆಹಲಿಯಿಂದ ಚೀಟಿ ಕಳುಹಿಸುವ ಮೂಲಕ ಮುಖ್ಯಮಂತ್ರಿಯ ಆಯ್ಕೆ ನಡೆಸಿತ್ತು. ವಿಶೇವೆಂದರೆ ಅಂದು ಕಾಂಗ್ರೆಸ್ ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಿದ್ದ ಬಿಜೆಪಿ ಇದೀಗ ಕಾಂಗ್ರೆಸ್ ನ್ನು ಓವರ್ ಟೇಕ್ ಮಾಡಿದೆ. ಈ ನಡುವೆ ಹೊಸ ಸಿಎಂ ಯಾರೆಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಎದುರಿಸದ ವ್ಯಕ್ತಿಯಿಂದ ಆರಂಭಗೊಂಡು ಕೇಂದ್ರ ಸಚಿವರ ವರೆಗೆ ಹೆಸರು ಕೇಳಿಬರುತ್ತಿದೆ. ಆದರೆ ಯಾರೆನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಯಾವುದಕ್ಕೂ ಸ್ವಲ್ಪ ಕಾದು ನೋಡೋಣ.

ಇತ್ತೀಚಿನ ಸುದ್ದಿ

ಜಾಹೀರಾತು